ಜಾಲ್ಸೂರು: ಬೈತಡ್ಕ ದಲ್ಲಿ ಡೀಸೆಲ್ ಟ್ಯಾಂಕರ್ ಪಲ್ಟಿ

ಜಾಲ್ಸೂರು: ಮಾಣಿ – ಮೈಸೂರು ರಾ.ಹೆದ್ದಾರಿಯ ಬೈತಡ್ಕ ಎಂಬಲ್ಲಿ ಡೀಸೆಲ್ ಟ್ಯಾಂಕರ್ ಪಲ್ಟಿಯಾದ ಘಟನೆ ಅ.30 ಮಧ್ಯಾಹ್ನ ಸಂಭವಿಸಿದೆ.

ಟ್ಯಾಂಕರ್ ಪಲ್ಟಿಯಾಗಿ ತೈಲ ಸೋರಿಕೆಯಾಗುತ್ತಿದ್ದು, ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಸ್ಥಳಕ್ಕೆ ಸುಳ್ಯ ‌ಅಗ್ನಿಶಾಮಕ‌ ಠಾಣೆ ಸಿಬ್ಬಂದಿ ಧಾವಿಸಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.