ಪಂಜ: ಸುಧೀರ್ಘ 26 ವರ್ಷ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಯೋಧ ಜೂನಿಯರ್ ಕಮಾಂಡಿಂಗ್ ಅಧಿಕಾರಿ ಗಿರೀಶ್ ಎ.ಕೆ. ಆರ್ನೋಜಿ ಯವರು ಇಂದು ಹುಟ್ಟೂರು ಪಂಜಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತೂರ್ ರವರು ಶ್ರೀ ದೇವರ ಪ್ರಸಾದ ಹಾಗೂ ಶಾಲು ಹೊದಿಸಿ ಗೌರವಿಸಿದರು.
