ಸುಬ್ರಹ್ಮಣ್ಯ: ಯುವತಿಯೊಂದಿಗೆ ಅಶ್ಲೀಲ ವರ್ತನೆ; ಪ್ರಕರಣ ದಾಖಲು

ಸುಬ್ರಹ್ಮಣ್ಯ: ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜೆಯಲ್ಲಿ ಪಾಲ್ಗೊಂಡು ಬೋಜನಾ ಶಾಲಾ ಬಳಿ ನಿಂತಿದ್ದ ಯುವತಿಯೋರ್ವಳ ದೇಹ ಸ್ಪರ್ಶಿಸಿ ಅಶ್ಲೀಲ ವರ್ತನೆ ತೋರಿದ ವ್ಯಕ್ತಿಯ ವಿರುದ್ದ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೀಪಾವಳಿ ಹಿನ್ನಲೆ ನ.2 ರಂದು ರಾತ್ರಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುತ್ತಿದ್ದ ಪೂಜೆಯಲ್ಲಿ ಭಾಗವಹಿಸಿ ಯುವತಿಯೋರ್ವಳು ಮನೆಯವರ ಜೊತೆ ಭೋಜನಾ ಶಾಲೆಯತ್ತ ತೆರಳಿದ್ದರು.

ಈ ಸಂದರ್ಭದಲ್ಲಿ ಊಟಕ್ಕೆ ಕುಳಿತುಕೊಳ್ಳಲು ಗೋಡೆ ಬದಿ ನಿಂತು ಕಾಯುತ್ತಿರುವಾಗ ಅಲ್ಲೇ ಪಕ್ಕದಲ್ಲಿ ಓಡಾಟ ಮಾಡುತ್ತಿದ್ದ ಆರೋಪಿ ಶಿವರಾಮ ಭಟ್ ಎಂಬಾತ ಯುವತಿಯ ಎದೆ ಭಾಗಕ್ಕೆ ಕೈ ಹಾಕಿ ದೈಹಿಕ ಹಿಂಸೆ ನೀಡಿರುವುದಾಗಿ ಆರೋಪಿಸಲಾಗಿದೆ. ಅಲ್ಲದೆ ಪ್ರಶ್ನಿಸಿದಕ್ಕೆ ಆರೋಪಿ ಅವಾಚ್ಯ ಶಬ್ದ ಗಳಿಂದ ಬೈದಿರುವುದಾಗಿ ದೂರಲಾಗಿದೆ. ಈತ ಸುಬ್ರಹ್ಮಣ್ಯದಲ್ಲೇ ಜೆರಾಕ್ಸ್ ಅಂಗಡಿಯೊಂದನ್ನು ಇಟ್ಟುಕೊಂಡಿದ್ದು ದೇಗುಲ ಪರಿಸರದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ .

ಯುವತಿಯ ದೂರನ್ನು ಪರಿಶೀಲಿಸಿ ಸುಬ್ರಹ್ಮಣ್ಯ ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಕಾಯ್ದೆಯಡಿ ( BNS ACT -75,352 ಕಾಲಂ) ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.