ಬೆಳ್ಳಾರೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ವಸಂತ ಸಂಭ್ರಮ

ಬೆಳ್ಳಾರೆ: ಇಲ್ಲಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ವಸಂತ ಸಂಭ್ರಮ ಕಾರ್ಯಕ್ರಮ ಇದರ ಅಂಗವಾಗಿ ಶಾಲಾ ಮೈದಾನದ ನವೀಕರಣ ಕ್ಕೆ ಗುದ್ದಲಿ ಪೂಜೆ,ವಸಂತ ಸಂಭ್ರಮದ ಲೋಗೋ ಬಿಡುಗಡೆ ಹಾಗೂ ಮನವಿ ಪತ್ರ ಬಿಡುಗಡೆಯು ನ.6 ರಂದು ನಡೆಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜೀವಿ ಆರ್.ರೈ, ಕೆಪಿಎಸ್ ನ ಎಸ್.ಡಿ.ಎಂ.ಸಿ ಅಧ್ಯಕ್ಷೆ ಹಾಗೂ ಶಾಸಕಿ ಭಾಗೀರಥಿ ಮುರುಳ್ಯರವರು ಗುದ್ದಲಿ ಪೂಜೆ ನೆರವೇರಿಸಿ, ವಸಂತ ಸಂಭ್ರಮದ ಲೋಗೊ ಹಾಗೂ ಮನವಿ ಪತ್ರ ಬಿಡುಗಡೆಗೊಳಿಸಿದರು.

ಸಂಚಾಲಕ ಎಸ್.ಎನ್.ಮನ್ಮಥ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ರೈ ಪನ್ನೆ,ಎಸ್.ಡಿ‌ಎಂ.ಸಿ. ಕಾರ್ಯಾಧ್ಯಕ್ಷ ಶ್ರೀನಾಥ ರೈ ಬಾಳಿಲ, ಕಾಲೇಜಿನ ಪ್ರಾಂಶುಪಾಲರಾದ ಜನಾರ್ಧನ ಎನ್, ಉಪಪ್ರಾಂಶುಪಾಲೆ ಉಮಾಕುಮಾರಿ, ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಗುರು ಮಾಯಿಲಪ್ಪ,ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯ.ಸ.ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು,ಪದ್ಮನಾಭ ಬೀಡು,ಗಂಗಾಧರ ರೈ ಪುಡ್ಕಜೆ, ಗ್ರಾಮ ಪಂಚಾಯತ್ ಸದಸ್ಯ ಚಂದ್ರಶೇಖರ ಪನ್ನೆ , ಕಟ್ಟಡ ಸಮಿತಿಯ ಹರ್ಷ ಜೋಗಿಬೆಟ್ಟು, ಐವರ್ನಾಡು ಗ್ರಾ.ಪಂ.ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ,ವಸಂತ ಉಲ್ಲಾಸ್, ಸಂಜಯ್ ನೆಟ್ಟಾರ್ ,ಇಂಜಿನಿಯರ್ ಗಳಾದ ಮಣಿಕಂಠ, ಗ್ರಾಮೀಣಾಭಿವೃದ್ಧಿ ಮತ್ತು ನೈರ್ಮಲ್ಯ ಹಾಗೂ ಕುಡಿಯುವ ನೀರು ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಚೈತ್ರಾ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.