ಎಲಿಮಲೆ: ಮರದಿಂದ ಬಿದ್ದು ವ್ಯಕ್ತಿಯೋರ್ವರು ದಾರುಣವಾಗಿ ಸಾವನ್ನಪ್ಪಿದ ಘಟನೆ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕೊಡಗಿನ ಸಿದ್ದಾಪುರ ಕೃಷ್ಣ ಎಂದು ಗುರುತಿಸಲಾಗಿದ್ದು ಅವರಿಗೆ 55 ವರ್ಷ ಪ್ರಾಯವಾಗಿತ್ತು.
ಕೃಷ್ಣ ಅವರು ತಮ್ಮ ಸಂಬಂಧಿಕರ ಮನೆಗೆ ಕೆಲಸಕ್ಕೆಂದು ಬಂದಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಆಸ್ಪತ್ರೆ ತಲುಪುವ ವೇಳೆಗಾಗಲೇ ಸಾವನ್ನಪ್ಪಿದರು.