ಪಂಜ : ಡಿ.16 ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಕ್ತೇಶ್ವರಿ ದೈವದ ನೂತನ ಕಟ್ಟೆ ನಿರ್ಮಾಣಕ್ಕೆ ಭೂಮಿ ಪೂಜೆ ಜರುಗಿತು. ದೇಗುಲದ ಎದುರು ಚಾವಡಿಯ ಹತ್ತಿರ ಇರುವ ರಕೇಶ್ವರಿ ಸಾನಿಧ್ಯದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿ ಭೂಮಿ ಪೂಜೆ ನೆರವೇರಿಸಿ ರಕೇಶ್ವರಿ ಕಟ್ಟೆ ಹಾಗು ಆವರಣ ಗೋಡೆ ಕೆಲಸ ಪ್ರಾರಂಭ ಮಾಡಲಾಯಿತು.

ದೇವಳದ ಪ್ರಧಾನ ಅರ್ಚಕ ರಾಮಚಂದ್ರ ಭಟ್ ವೈದಿಕ ಕಾರ್ಯಕ್ರಮ ನೆರವೇರಿಸಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಭಕ್ತಾದಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.