ಸುಳ್ಯ: ತಾಲೂಕಿನ ಅಮರಮುಡ್ನೂರು ಗ್ರಾಮದ ಮರ್ಗಿಲಡ್ಕ ನಿವಾಸಿ ಪುನೀತ್( 30) ರವರು ಸೂರಿಕುಮೇರು ಎಂಬಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿರುತ್ತಾರೆ.
ಮಂಗಳೂರಿನಲ್ಲಿ ಕೋಸ್ಟಲ್ ಕೋಳಿ ಫಾರ್ಮ್ ನಲ್ಲಿ ಚಾಲಕರಾಗಿದ್ದ ಪುನೀತ್ ಕೆಲಸ ಮುಗಿಸಿ ಮನೆಗೆ ಹಿಂತಿರುಗುವ ವೇಳೆ ಸೂರಿಕುಮೇರು ರಾಜ್ಯ ಹೆದ್ದಾರಿಯಲ್ಲಿ ಟೆಂಪೊ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.
ಮೃತರು ಅವಿವಾಹಿತರಾಗಿದ್ದು ತಂದೆ ಗಂಗಾಧರ ಗೌಡ ಮರ್ಗಿಲಡ್ಕ , ತಾಯಿ ಮತ್ತು ಇಬ್ಬರು ಸಹೋದರರನ್ನು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ. ಸ್ಥಳೀಯ ಸಂಘಟನೆಗಳಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದ ಪುನೀತ್ ಅಗಲಿಕೆಗೆ ಬಂಧುಗಳು ಕಂಬನಿ ಮಿಡಿದಿದ್ದಾರೆ.