ಸಂಪಾಜೆ: ಸ್ಕೂಟಿ ಮತ್ತು ಕಂಟೈನರ್ ನಡುವೆ ಭೀಕರ ಅಪಘಾತ| ಸವಾರರಿಬ್ಬರು ದಾರುಣ ಸಾವು

ಸಂಪಾಜೆ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆಯ ಚೆಡಾವು ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಡಿ.24ರ ಸಂಜೆ ಸಂಭವಿಸಿದೆ.

ಕಂಟೈನರ್ ಹಾಗೂ ಸ್ಕೂಟಿ ಮಧ್ಯೆ ಅಪಘಾತ ಸಂಭವಿಸಿದ್ದು ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹ ಸವಾರೆ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಂಟೈನರ್ ಹಾಗೂ ಮಡಿಕೇರಿ ಕಡೆಯಿಂದ ಬರುತ್ತಿದ್ದ ಸ್ಕೂಟಿ ಮಧ್ಯೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅಪಘಾತಕ್ಕೆ ಸ್ಕೂಟಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಲ್ಲ ಮೂಲಗಳ ಪ್ರಕಾರ ಸಾವನ್ನಪ್ಪಿದ ಸವಾರನನ್ನು ಚಿದಾನಂದ ಆಚಾರ್ಯ ಎಂದು ಗುರುತಿಸಲಾಗಿದ್ದು, ಮೃತ ಮಹಿಳೆ ಆತನ ಪತ್ನಿ ಎಂದು ಹೇಳಲಾಗಿದೆ.