ಗುತ್ತಿಗಾರು: ಸೊಳ್ಳೆ ಉತ್ಪತ್ತಿಯ ತಾಣವಾಗ್ತಿದೆ ಚರಂಡಿ

ಗುತ್ತಿಗಾರು: ಇಲ್ಲಿನ ಬಸ್ ನಿಲ್ದಾಣದ ಬಳಿಯಲ್ಲಿ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆಯಾಗುತ್ತಿದ್ದು, ಸೊಳ್ಳೆಗಳ ಉತ್ಪತ್ತಿಯ ತಾಣವಾಗುತ್ತಿದೆ.

ಗುತ್ತಿಗಾರು ಮುಖ್ಯಪೇಟೆಯಲ್ಲಿರುವ ಈ ಚರಂಡಿಯ ಅವ್ಯವಸ್ಥೆಯಿಂದಾಗಿ ಕೊಳಚೆ ನೀರು ಸಂಗ್ರಹವಾಗಿದೆ. ಚರಂಡಿ ತೆರೆದ ಸ್ಥಿತಿಯಲ್ಲಿರುವುದರಿಂದ ಪ್ರಾಣಿ,ಪಕ್ಷಿಗಳು ಕೊಳಚೆ ನೀರನ್ನು ಬಳಸುವಂತಾಗಿದೆ. ಇದು ಹೀಗೆ ಮುಂದುವರೆದರೇ ಸಾಂಕ್ರಾಮಿಕ ರೋಗ ಉತ್ಪತ್ತಿಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಸ್ಥಳಿಯಾಡಳಿತ ಹಾಗೂ ಆರೋಗ್ಯ ಇಲಾಖೆ ಗಮನ ಹರಿಸುವಂತೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಸ್ಥಳೀಯಾಡಳಿತಕ್ಕೆ ಒತ್ತಾಯಿಸಿದ್ದಾರೆ.