ಕಡಬ:ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸುಳ್ಯ ಆಲಂಕಾರು ಶಾಖೆ ಯಶಸ್ವಿಯಾಗಿ ಒಂದು ವರ್ಷವನ್ನು ಪೂರೈಸಿ ಎರಡನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ಆಲಂಕಾರು ಶ್ರೀ ದುರ್ಗಾಟವರ್ಸ್ ನಲ್ಲಿ ಕಾರ್ಯಚರಿಸುತ್ತಿರುವ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಶಾಖೆಯಲ್ಲಿ ಗಣಹೋಮ, ಲಕ್ಷ್ಮೀ ಪೂಜೆ ಮಾಡಲಾಯಿತು.
ಈ ಸಂದರ್ಭದಲ್ಲಿ ವೆಂಕಟರಮಣ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸಂಘದ ಪ್ರಧಾನ ವ್ಯವಸ್ಥಾಪಕ ಚಂದ್ರಶೇಖರ ಎಂ, ಆಂತರಿಕ ಲೆಕ್ಕಪರಿಶೋಧಕ ಗುಮ್ಮಣ್ಣ ಗೌಡ ಹೆಚ್, ನ್ಯಾಯವಾದಿ ಶಿವಪ್ರಸಾದ್ ಪುತ್ತಿಲ, ಸಂಸ್ಥೆಯ ಹಿತೈಷಿಗಳಾದ ಬಾಲಕೃಷ್ಣ ಗೌಡ ಕತ್ಲಡ್ಕ, ಶಿವರಾಮ ಗೌಡ ಮಡಪ್ಪಾಡಿ, ಜನಾರ್ಧನ ಗೌಡ ತೋಟಂತಿಲ , ದಾಮೋದರ ಗೌಡ ಕಕ್ವೆ, ಯೋಗೀಶ್ ಕೆಡೆಂಜಿ, ದಯಾನಂದ ಆಲಡ್ಕ, ಸದಾಶಿವ ಶೆಟ್ಟಿ ಮಾರಂಗ ,ಲೋಕನಾಥ ವಜ್ರಗಿರಿ, ಶ್ರೀ ದುರ್ಗಾಟವರ್ಸ್ ಮಾಲಕ ರಾಧಾಕೃಷ್ಣ ರೈ ಪರಾರಿಗುತ್ತು, ಪ್ರವೀಣ್ ಕುಂಟ್ಯಾನ, ನಾಗೇಶ್ ಕೆಡೆಂಜಿ ಸೇರಿದಂತೆ ಗ್ರಾಹಕರು ಆಗಮಿಸಿ ಶುಭಹಾರೈಸಿದರು.
ಸಂಸ್ಥೆಯ ಶಾಖಾ ವ್ಯವಸ್ಥಾಪಕಿ ಕವಿತಾ ಹಾಗೂ ಸಿಬ್ಬಂದಿ ವರ್ಗ ಹಾಗೂ ಪಿಗ್ಮಿ ಸಂಗ್ರಾಹಕರು, ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪುರೋಹಿತ ವೇ|ಮೂ| ಕೇಶವ ಭಟ್ ಕೇಕನಾಜೆ ಪೂಜಾ ವಿಧಿವಿಧಾನ ನಡೆಸಿಕೊಟ್ಟರು.