ಶ್ರೀ ಗುರು ರಾಘವೇಂದ್ರ ಭಜನಾ ಮಂದಿರದಲ್ಲಿ 13 ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವವು ಜ.29 ರಂದು ನಡೆಯಿತು.
ಬೆಳಿಗ್ಗೆ ಗಣಪತಿ ಹವನ, ನಾಗತಂಬಿಲ, ಭಜನಾ ಕಾರ್ಯಕ್ರಮ ನಡೆಯಿತು. ಸಾಯಂಕಾಲ ಆಶ್ಲೇಷ ಬಲಿ, ಅಲಂಕಾರ ಪೂಜೆ ಹಾಗೂ ಹಿಂದೂ ಕಾಲ ಕೇಸರಿ ಜಾಲ್ಸೂರು ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ನಂತರ ಸಭಾ ಕಾರ್ಯಕ್ರಮ ನಡೆಯಿತು,ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಜನಾ ಮಂದಿರದ ಗೌರವ ಅಧ್ಯಕ್ಷರಾದ ಮೋಹನ್ ನಂಗಾರು ವಹಿಸಿದ್ದರು. ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಡಾ. ಕೃಷ್ಣ ಪ್ರಸನ್ನ ಇವರು ದಿಕ್ಸೂಚಿ ಭಾಷಣ ಮಾಡಿದರು.
ವೇದಿಕೆಯಲ್ಲಿ ಭಜನಾ ಮಂದಿರದ ಅಧ್ಯಕ್ಷ ಜಯರಾಮ ರೈ ಜಾಲ್ಪುರು, ಸಾರ್ವಜನಿಕ ಶ್ರೀ ಗಣೇಶ ಉತ್ಸವ ಸಮಿತಿಯ ಅಧ್ಯಕ್ಷ ನಿಶಾಂತ್ ಮೊಂಟಡ್ಕ, ಭಜನಾ ಮಂದಿರದ ಪ್ರಧಾನ ಕಾರ್ಯದರ್ಶಿ ಆತ್ಮರಾಮ ಗಬಲಡ್ಕ, ಖಜಾಂಜಿ ವಿಷ್ಣು ಭಟ್ ಪೆರುಂಬಾರು, ಭಜನಾ ಮಂದಿರದ ಅರ್ಚಕ ರಾಮಕೃಷ್ಣ ಭಟ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕಮಲಾಕ್ಷ ನಂಗಾರು ನಿರೂಪಿಸಿದರು.
ಸ್ವರೂಪ್ ಕದಿಕಡ್ಕ ಸ್ವಾಗತಿಸಿದರು, ಜಯರಾಮ ಕದಿಕಡ್ಕ ವಂದಿಸಿದರು.