ಕುಕ್ಕೆ‌ ದೇಗುಲಕ್ಕೆ ಭೇಟಿ ನೀಡಿದ ಗಾಯಕಿ‌ ಎಸ್.ಜಾನಕಿ

ಸುಬ್ರಹ್ಮಣ್ಯ: ಭಾರತೀಯ ಚಿತ್ರರಂಗದ ಪ್ರಖ್ಯಾತ ಹಿನ್ನೆಲೆ ಗಾಯಕಿ ಎಸ್‌.ಜಾನಕಿ ಅವರು ಗುರುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಅವರನ್ನು ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್‌ ಹಾಗೂ ಸುಬ್ರಹ್ಮಣ್ಯದ ನಾಗರಿಕರ ಪರವಾಗಿ ಗ್ರಾಮ ಪಂಚಾಯತ್‌ ಸದಸ್ಯ ಹರೀಶ ಇಂಜಾಡಿ ಅವರು ಶಾಲು ಹೊದೆಸಿ, ಪ್ರಸಾದ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಜಯರಾಮ ರಾವ್‌,ಯಜ್ಞೇಶ್ ಆಚಾರ್‌, ಮಹೇಶ್‌ ಮತ್ತಿತರರು ಉಪಸ್ಥಿತರಿದ್ದರು.