ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮಿತ್ರದೇವ ಮಡಪ್ಪಾಡಿ

ಗುತ್ತಿಗಾರು: ಇಲ್ಲಿನ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ‌ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಕರ್ನಾಟಕ ಸರಕಾರ ಸದಸ್ಯರನ್ನು ನೇಮಕಗೊಳಿಸಿತ್ತು. ಈ ಸದಸ್ಯರ ಸಭೆ ಭಾನುವಾರ(ಮಾ2) ನಡೆದಿದ್ದು, ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆದಿದೆ.

ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಮಿತ್ರದೇವ ಮಡಪ್ಪಾಡಿ ಅವಿರೋಧ ಆಯ್ಕೆಯಾಗಿದ್ದಾರೆ

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಕೇಶವ ಹೊಸೋಳಿಕೆ, ಪುರುಷೋತ್ತಮ ಬದಿಯಡ್ಕ, ಜಯಾನಂದ ಪಟ್ಟೆ, ಶಿವಪ್ರಸಾದ್ ಕಂದ್ರಪ್ಪಾಡಿ, ಸನತ್ ಮುಳುಗಾಡು, ಉಷಾ ಮಲ್ಕಜೆ, ಪರಮೇಶ್ವರ ಭಟ್ ಉಪಸ್ಥಿತರಿದ್ದರು.