ಸಮಗ್ರ ನ್ಯೂಸ್: ಕಡಬ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಕಾಂಗ್ರೆಸ್ ವರಿಷ್ಠರ ಮೇಲೆ ಮುನಿಸು ಬಂದಂತೆ ಕಾಣುತ್ತಿದೆ. ಯಾಕೆಂದರೆ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಟಿ.ಬಿ ಜಯಚಂದ್ರ ಹಾಗೂ ಕೃಷಿ ಸಚಿವ ಚೆಲುವರಾಯ ಸ್ವಾಮಿ ಭೇಟಿ ನೀಡಿದ್ದರು. ಆದರೆ ಇವರನ್ನು ಭೇಟಿಯಾಗಲು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಲೀ ಅಥವಾ ಕಾರ್ಯಕರ್ತರಾಗಲಿ ಬಂದಿರದೇ ಇರುವುದು ಈ ಅನುಮಾನಕ್ಕೆ ಕಾರಣವಾಗಿದೆ.
ಮೇಲ್ನೋಟಕ್ಕೆ ಕಡಬ ಬ್ಲಾಕ್ ಕಾಂಗ್ರೆಸ್ ಅಥವಾ ಸುಳ್ಯ ಬ್ಲಾಕ್ ಕಾಂಗ್ರೆಸ್ ನಲ್ಲಿ ಹೇಳಿಕೊಳ್ಳುವ ಅಸಮಾಧಾನವೇನೂ ಇಲ್ಲ. ಆದರೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇದುವರೆಗೂ ಆಡಳಿತ ಮಂಡಳಿ ನೇಮಕವಾಗದೇ ಇರುವುದು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣ ಎಂದು ಹೇಳಲಾಗಿದೆ.
ಇದೇ ಕಾರಣಕ್ಕೆ ಕಾಂಗ್ರೆಸ್ ಮುಖಂಡರನ್ನು ಸುಬ್ರಹ್ಮಣ್ಯದಲ್ಲಿ ಕಾರ್ಯಕರ್ತರು ಏಕಾಂಗಿ ಮಾಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೂ ರಾಜ್ಯದ ಪ್ರತಿಷ್ಠಿತ ದೇವಸ್ಥಾನಕ್ಕೆ ಆಡಳಿತ ಮಂಡಳಿ ನೇಮಕ ಮಾಡದಿರುವುದರ ಹಿಂದಿನ ಕಾರಣಗಳು ಏನೆಂಬುದು ತಿಳಿದುಬಂದಿಲ್ಲ.