ಸುಳ್ಯ: ಅಲ್ಪಸಂಖ್ಯಾತರ ಇಲಾಖೆಯ ಹಾಸ್ಟೆಲ್ ಮಂಜೂರು ಮಾಡುವಂತೆ ಸುಳ್ಯ ನಗರ ಪಂಚಾಯತ್ ಸೂಡ ಅಧ್ಯಕ್ಷ ಕೆ. ಎಂ. ಮುಸ್ತಫ ಸಚಿವರಿಗೆ ಮನವಿ

ಸುಳ್ಯ ತಾಲೂಕು ಕೇಂದ್ರಕ್ಕೆ ಅಲ್ಪಸಂಖ್ಯಾತರ ಇಲಾಖೆಯ ಹಾಸ್ಟೆಲ್ ಮಂಜೂರು ಮಾಡುವಂತೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾದ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ಅವರಿಗೆ ಸೂಡ ಅಧ್ಯಕ್ಷ ಕೆ. ಎಂ. ಮುಸ್ತಫ ಮನವಿಮಾಡಿದ್ದಾರೆ.

ಸುಳ್ಯ ಅತೀ ವೇಗವಾಗಿ ಬೆಳೆಯುವ ತಾಲೂಕು ಕೇಂದ್ರವಾಗಿದ್ದು, ಕೇರಳ ರಾಜ್ಯ ಮತ್ತು ಕೊಡಗು ಜಿಲ್ಲೆಯ ಗಡಿ ಪ್ರದೇಶವಾಗಿರುತ್ತದೆ . ರಾಜ್ಯದ ಯಾವ ತಾಲೂಕು ಕೇಂದ್ರದಲ್ಲಿಯೂ ಇಲ್ಲದಷ್ಟು ಶಿಕ್ಷಣ ಸಂಸ್ಥೆಗಳು ಪೂರ್ವ ಪ್ರಾಥಮಿಕದಿಂದ ಮೆಡಿಕಲ್, ಇಂಜಿನಿಯರಿಂಗ್, ಡೆಂಟಲ್ ಕಾಲೇಜು ಒಳಗೊಂಡಂತೆ ಎಲ್ಲಾ ಕೋರ್ಸ್ ಗಳು ಲಭ್ಯವಿದೆ.

ಆದರೆ ವಿದ್ಯಾರ್ಜನೆ ಮಾಡುವ ವಿದ್ಯಾರ್ಥಿಗಳಿಗೆ, ಉದ್ಯೋಗಾರ್ಥಿಗಳಿಗೆ ಸರಿಯಾದ ವಸತಿ ಸೌಕರ್ಯ ವ್ಯವಸ್ಥೆ ಇರುವುದಿಲ್ಲ. ಆದ್ದರಿಂದ ಸುಳ್ಯ ತಾಲೂಕು ಕೇಂದ್ರಕ್ಕೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಹಾಸ್ಟೆಲ್ ಮಂಜೂರಾತಿ ಗೊಳಿಸಬೇಕಾಗಿ ವಿನಂತಿಸಿದ್ದಾರೆ.