ಸಂಪಾಜೆ: ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಣಿ – ಮೈಸೂರು ರಾ.ಹೆದ್ದಾರಿಯ ಸಂಪಾಜೆ ಸಮೀಪದ ಕೊಯನಾಡಿನಿಂದ ವರದಿಯಾಗಿದೆ.
ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಲಾರಿಗೆ ಮಡಿಕೇರಿಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದು ಬಂದಿದೆ.
ಉಳಿದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಮೃತಪಟ್ಟವರ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.