ಸುಬ್ರಹ್ಮಣ್ಯ: ಇಲ್ಲಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ 2025 -26 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ಅಜಿತ್ ಕುಮಾರ್ ಪಾಲೇರಿ ನೆರವೇರಿಸಿ ಶಿಕ್ಷಣದ ಜೊತೆಗೆ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವುದು ವಿದ್ಯಾರ್ಥಿಗಳ ಕರ್ತವ್ಯ ಇದಕ್ಕೆ ನಾಯಕತ್ವ ಗುಣಗಳು ಪೂರಕವಾಗಿರಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸಮಿತಿಯ ಅಧ್ಯಕ್ಷರಾದ ಹರೀಶ್ ಇoಜಾಡಿ ವಹಿಸಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಡಾ.ದಿನೇಶ ಪಿಟಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಡಾ. ರಘು,ಶ್ರೀಮತಿ ಲೀಲಾ ಮನಮೋಹನ್ , ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ಡಾ. ರವಿ ಕಕ್ಕೆ ಪದವು ವಿದ್ಯಾರ್ಥಿ ಸಂಘದ ಸಲಹೆಗಾರರಾದ ಮನೋಹರ್, ಶಿವಪ್ರಸಾದ್ ಎಸ್, ಕೃತಿಕಾ ಪಿ ಎಸ್, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ನಿಶಾ ಗೌರಿ, ಉಪಾಧ್ಯಕ್ಷರಾದ ಕೀರ್ತನ್ ಬಿ ಎಲ್ ಮತ್ತು ಕಾರ್ಯದರ್ಶಿಯಾದ ದೀಕ್ಷಾ ಎಂ ಕೆ ಉಪಸ್ಥಿತರಿದ್ದರು.
2024 -25 ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಬಿ ಎ, ಬಿ. ಕಾಂ ಮತ್ತು ಬಿಬಿಎ ವಿಭಾಗದಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಹಿರಿಯ ವಿದ್ಯಾರ್ಥಿಗಳಾದ ವಿನುತಾ, ಮಯೂರಿ ಮತ್ತು ರಚನಾ ಇವರುಗಳನ್ನು ಸನ್ಮಾನಿಸಲಾಯಿತು. ಸಮಾಜ ಸೇವಕ ವಿದ್ಯಾರ್ಥಿ ವೇತನದ ಮಾಹಿತಿಯನ್ನು ದ. ಕ ಮತ್ತು ಉಡುಪಿ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಉಚಿತವಾಗಿ ನೀಡುತ್ತಿರುವ ನಿವೃತ್ತ ಅಧ್ಯಾಪಕ ನಾರಾಯಣ ನಾಯಕ್ ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಮನೋಹರ ಸ್ವಾಗತಿಸಿ, ಕುಮಾರಿ ನಿಶಾ ಗೌರಿ ವಂದಿಸಿದರು. ಸಮಾಜಶಾಸ್ತ್ರ ಉಪನ್ಯಾಸಕಿ ಆರತಿ ನಿರೂಪಿಸಿದರು.