ಕುಕ್ಕೆ ಸುಬ್ರಹ್ಮಣ್ಯ: ಇಂದು ರಾತ್ರಿ ಪಂಚಮಿ ರಥೋತ್ಸವ| ನಾಳೆ(ನ.26) ಚಂಪಾಷಷ್ಟಿ ರಥೋತ್ಸವ

ಸುಬ್ರಹ್ಮಣ್ಯ: ಚಂಪಾಷಷ್ಟಿ ಮಹೋತ್ಸವದ ಅಂಗವಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ರಾತ್ರಿ ಪಂಚಮಿ ರಥೋತ್ಸವ ನಡೆಯಲಿದೆ. ಬಳಿಕ ಕುಕ್ಕೆ ಬೆಡಿ ನಡೆಯಲಿದೆ.

ಚಂಪಾಷಷ್ಠಿ ಮಹೋತ್ಸವದ ಪ್ರಯುಕ್ತ‌ ನಾಳೆ (ನ.26ರಂದು) ಬ್ರಹ್ಮರಥೋತ್ಸವ ನಡೆಯಲಿದೆ. ನಾಳೆ ಬೆಳಿಗ್ಗೆ 7.29ರ ವೃಶ್ಚಿಕ ಲಗ್ನ ಶುಭ ಮುಹೂರ್ತದಲ್ಲಿ ಚಂಪಾಷಷ್ಠಿ ಬ್ರಹ್ಮರಥೋತ್ಸವ ನಡೆಯಲಿದೆ ಎಂದು ದೇಗುಲದ ಪ್ರಕಟಣೆ ತಿಳಿಸಿದೆ.