ಸುಳ್ಯ: ಜ.30ನೇ ಶುಕ್ರವಾರದಂದು ಬೆಳ್ಳಾರೆ-ಗುತ್ತಿಗಾರು-ಸುಬ್ರಹ್ಮಣ್ಯ 33ಕೆವಿ ಮಾರ್ಗ ಮತ್ತು 33/11 ಕೆವಿ ಗುತ್ತಿಗಾರು ಮತ್ತು ಸುಬ್ರಹ್ಮಣ್ಯ ವಿದ್ಯುತ್ ಉಪ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.
ಮುಂಜಾನೆ 10 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ಸುಬ್ರಹ್ಮಣ್ಯ ಉಪ ಕೇಂದ್ರದಿಂದ ಹೊರಡುವ ಹರಿಹರ, ನಡುಗಲ್ಲು, ಕುಮಾರಧಾರ, ಆದಿಶೇಷ, ಕೈಕಂಬ ಮತ್ತು ಏನೆಕಲ್ಲು, 11ಕೆವಿ ಫೀಡರ್ ಗಳಲ್ಲಿ ಹಾಗೂ ಗುತ್ತಿಗಾರು ಉಪ ಕೇಂದ್ರದಿಂದ ಹೊರಡುವ ಗುತ್ತಿಗಾರು, ಕೂತ್ಕುಂಜ, ಮಡಪ್ಪಾಡಿ, ಎಲಿಮಲೆ, ಮರ್ಕಂಜ ಮತ್ತು ಬಳ್ಪ 11ಕೆವಿ ಫೀಡರ್ ಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.