ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲಾಜೆ ಇಂದ ಏನೇಕಲ್ಲು ಹಾಗೂ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸಂಪರ್ಕಿಸುವ ರಸ್ತೆ ಮಳೆಗಾಲದಲ್ಲಿ ಸಂಪೂರ್ಣ ಹಾಳಾಗುತ್ತಿದ್ದು, ಆ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಭಾರೀ ತೊಂದರೆ ಅನುಭವಿಸುತ್ತಿದ್ದರು. ರಸ್ತೆ ಗುಂಡಿಗಳು ಮತ್ತು ಕೆಸರು ತುಂಬಿಕೊಂಡ ಪರಿಣಾಮ ಸ್ಥಳೀಯರು ಸಂಕಷ್ಟಕ್ಕೆ ಒಳಗಾಗಿದ್ದರು.
ಈ ಸಮಸ್ಯೆ ಕುರಿತು ಗ್ರಾಮಸ್ಥರು ಹಲವು ಬಾರಿ ಪಂಚಾಯಿತಿಗೆ ಮನವಿ ಸಲ್ಲಿಸಿದ್ದರೂ ಆರಂಭದಲ್ಲಿ ಯಾವುದೇ ಸ್ಪಂದನೆ ದೊರಕಲಿಲ್ಲ. ಇದರಿಂದ ಬೇಸತ್ತ ಗ್ರಾಮಸ್ಥರು ರಸ್ತೆ ಮಧ್ಯೆ ಬಾಳೆ ಗಿಡ ನೆಡುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿ ಪಂಚಾಯಿತಿಗೆ ಸವಾಲು ಹಾಕಿದರು.
ಗ್ರಾಮಸ್ಥರ ಈ ಕ್ರಮಕ್ಕೆ ಸ್ಪಂದಿಸಿದ ಗ್ರಾಮ ಪಂಚಾಯಿತಿ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಂಡು ರಸ್ತೆ ದುರಸ್ತಿ ಕಾರ್ಯವನ್ನು ಆರಂಭಿಸಿದರು. ಇದರಿಂದಾಗಿ ಸ್ಥಳೀಯರ ಬಹುಕಾಲದ ಬೇಡಿಕೆ ಈಡೇರಿದಂತಾಗಿದೆ.
ಈ ಕುರಿತು ಗ್ರಾಮಸ್ಥರು ಹೃದಯಸ್ಪರ್ಶಿ ಅಭಿನಂದನೆ ಸಲ್ಲಿಸಿದ್ದಾರೆ.

ದಾಮೋದರ ಮರಕತ, ಪ್ರಕಾಶ್ ನೇರಳಗದ್ದೆ,ಶೇಖರ ನೇರಳಗದ್ದೆ, ನಿತಿನ್ ಮಾಣಿಬೈಲು, ಧರ್ಮಪಾಲ ಮರಕತ ಸರಸ್ವತಿನೇರಳಗದ್ದೆ, ರಾಮಕೃಷ್ಣನೇರಳಗದ್ದೆ, ಧನುಷ್ ಮರಕತ,
ವರದಿ :ಚೇತನ್ ಮಾಣಿಬೈಲು
9483964639