ಸುಬ್ರಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರಿಗಾಗಿ “ಸ್ವಸ್ಥ ಮಹಿಳೆ – ಸಮೃದ್ಧ ಭವಿಷ್ಯ” ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ, ಸುಬ್ರಹ್ಮಣ್ಯದ ಮಹಿಳಾ ಸಬಲೀಕರಣ ಘಟಕ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶ ಇವುಗಳ ಸಹಯೋಗದೊಂದಿಗೆ ಆ.5 ಬುಧವಾರದಂದು ಮಹಿಳಾ ವಿದ್ಯಾರ್ಥಿನಿಯರಿಗಾಗಿ “ಸ್ವಸ್ಥ ಮಹಿಳೆ – ಸಮೃದ್ಧ ಭವಿಷ್ಯ” ಎಂಬ ವಿಷಯದ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಲೀಲಾವತಿ ಪಂಜ, ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರು ಆಗಮಿಸಿದ್ದರು. ಇವರು ವಿದ್ಯಾರ್ಥಿನಿಯರಿಗೆ ಪೌಷ್ಟಿಕ ಆಹಾರದ ಅಗತ್ಯತೆ, ಋತುಚಕ್ರದ ಸಮಸ್ಯೆಗಳು, ಮಹಿಳೆಯರ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಬಗ್ಗೆ ವಿಸ್ತಾರವಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ್ ಪಿ.ಟಿ ವಹಿಸಿದ್ದರು ಮತ್ತು ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಮಹಿಳಾ ಸಬಲೀಕರಣ ಘಟಕದ ಸದಸ್ಯರಾದ ಶ್ರೀಮತಿ ಅಶ್ವಿನಿ ಎಸ್.ಎನ್. ಹಾಗೂ ಕುಮಾರಿ ಭಕ್ತಿ ಶ್ರೀ ಇವರು ಕಾರ್ಯಕ್ರಮಕ್ಕೆ ಸಹಕರಿಸಿದರು. ಕಾರ್ಯಕ್ರಮದಲ್ಲಿ ಮಹಿಳಾ ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಸಬಲೀಕರಣ ಘಟಕದ ಸಂಯೋಜಕರಾದ ಶ್ರೀಮತಿ ಕೃತಿಕಾ ಪಿ.ಎಸ್. ಅವರು ಸ್ವಾಗತಿಸಿದರು. ವಿದ್ಯಾರ್ಥಿ ನಾಯಕಿ ಕುಮಾರಿ ದೇವಿಕ, ತೃತೀಯ B.Com ವಂದನಾರ್ಪಣೆ ನೆರವೇರಿಸಿದರು. ಕಾರ್ಯಕ್ರಮವನ್ನು ಕುಮಾರಿ ಸಂಖ್ಯಾ, ತೃತೀಯ B.A ಮತ್ತು ಕುಮಾರಿ ವರ್ಷಿಣಿ ಕೆ, ದ್ವಿತೀಯ B.A ನಿರೂಪಿಸಿದರು.