ಸುಬ್ರಮಣ್ಯ: ಕೆ ಎಸ್ ಎಸ್ ಕಾಲೇಜಿನಲ್ಲಿ 80ನೇ  ಸ್ವಾತಂತ್ರ್ಯೋತ್ಸವ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಇದರ ಸಹಯೋಗದೊಂದಿಗೆ ಆ.15ರಂದು  80ನೇ ವರ್ಷದ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು.

 ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್ ಎಸ್ ಇಂಜಾಡಿ ಧ್ವಜಾರೋಹಣ ನೆರವೇರಿಸಿದರು. ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಶ್ರೀಮತಿ ಸೌಮ್ಯ ಭರತ್, ಶ್ರೀಮತಿ ಲೀಲಾಮನಮೋಹನ್ , ಶ್ರೀಮತಿ ಪ್ರವೀಣ ಪಿ ರೈ ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಶ್ರೀ ಭವಾನಿ ಶಂಕರ್ ಪೈಲಾಜೆ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕಿ ಶ್ರೀಮತಿ ಶ್ರೀಲತಾ ಕಮಿಲ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ಸಂಯೋಜಕರಾದ ಡಾ. ದಿನೇಶ

ಕೆ ಉಪಸ್ಥಿತರಿದ್ದರು. 

ಅಂತಿಮ ಬಿಕಾಂ ವರ್ಷದ ವಿದ್ಯಾರ್ಥಿಗಳಿಂದ ದೇಶದ ತ್ಯಾಗ ಹಾಗೂ ಬಲಿದಾನಕ್ಕೆ ಸಂಬಂಧಿಸಿದ ನೃತ್ಯವನ್ನು ಪ್ರದರ್ಶಿಸಿದರು . ಸ್ವಾ ತಂತ್ರೋತ್ಸವ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. 

ಸಂಸ್ಥೆಯ ಪ್ರಾಂಶುಪಾಲರಾದ ಡಾ. ದಿನೇಶ ಪಿ ಟಿ ಸ್ವಾಗತಿಸಿ, ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ಸದಸ್ಯರಾದ ಶ್ರೀಮತಿ ಪ್ರಮೀಳ ಎನ್ ವಂದಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ಡಾ. ವಿನ್ಯಾಸ್ ಕಾರ್ಯಕ್ರಮವನ್ನು ನಿರೂಪಿಸಿದರು.