ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ 2026–27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ರಚನೆ ಯಶಸ್ವಿಯಾಗಿ ನೆರವೇರಿತು. ಈ ಸಂದರ್ಭದಲ್ಲಿ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ತೃತೀಯ ಬಿ.ಕಾಂ ವಿದ್ಯಾರ್ಥಿನಿ ದಿಶಾ ಎಸ್., ಉಪಾಧ್ಯಕ್ಷರಾಗಿ ತೃತೀಯ ಬಿ.ಎ ವಿದ್ಯಾರ್ಥಿ ಬಿಪಿನ್ ಎ. ಹಾಗೂ ಕಾರ್ಯದರ್ಶಿಯಾಗಿ ದ್ವಿತೀಯ ಬಿಬಿಎ ವಿದ್ಯಾರ್ಥಿ ರಿತೀಶ್ ಕೆ. ಆಯ್ಕೆಯಾಗಿದ್ದಾರೆ.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ, ಅವರ ಮುಂದಿನ ಕಾರ್ಯಚಟುವಟಿಕೆಗಳಿಗೆ ಶುಭ ಹಾರೈಸಿದರು