ಸುಬ್ರಮಣ್ಯ: ಕೆ ಎಸ್ ಎಸ್ ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ 

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ದಕ್ಷಿಣ ಕನ್ನಡ ಜಿಲ್ಲಾ  ಉಪವಲಯ ಅರಣ್ಯಾಧಿಕಾರಿ ಹಾಗೂ ಮೋಚಣಿದಾರರ ಸಂಘ ಮಂಗಳೂರು ಜಂಟಿಯಾಗಿ ಸೆ.01 ರಂದು ವನ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.  

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ ಪಿ.ಟಿ ವಹಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ  ಸುಬ್ರಹ್ಮಣ್ಯ ಉಪ ವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗ ಶ್ರೀ ಪ್ರಶಾಂತ್ ಕುಮಾರ್ ಪೈ, ಇವರು ಗಿಡ  ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬುದಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು.  ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ಶ್ರೀ ಚೇತನ್ ಎಚ್. ಪಿ,  ಸಿ.ಟಿ.ಡಿ ನೆಟ್ಟಣ ವಲಯದ ಅರಣ್ಯಾಧಿಕಾರಿ ಶ್ರೀ ಜಯಕುಮಾರ್ ,ದಕ್ಷಿಣ ಕನ್ನಡ ಜಿಲ್ಲಾ ಉಪವಲಯದ ಅಧ್ಯಕ್ಷರಾದ ಶ್ರೀ ಯೋಗೀಶ್ ಜಿ. ಸಿ ಕಾರ್ಯಕ್ರಮದ ಅತಿಥಿಗಳಾಗಿದ್ದರು. 

ಎನ್.ಎಸ್.ಎಸ್ ಘಟಕದ ಕಾರ್ಯಕ್ರಮ ಅಧಿಕಾರಿ ಶ್ರೀಮತಿ ಸುಮಿತ್ರ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 

ಸಂಸ್ಥೆಯ ಆಂತರಿಕ ಗುಣಮಟ್ಟ ಭರವಸಾಕೋಶದ  ಸಂಯೋಜಕಿ ಹಾಗೂ ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿ ಶ್ರೀಮತಿ ಶ್ರೀ ಲತಾ ಕಮಿಲ ಸ್ವಾಗತಿಸಿ,  ಎನ್.ಎಸ್.ಎಸ್ ಸ್ವಯಂ ಸೇವಕಿ ಸಂಜನಾ  ವಂದಿಸಿದರು. ಎನ್.ಎಸ್.ಎಸ್ ಘಟಕದ ನಾಯಕಿ ಹರ್ಷಿತ ನಿರೂಪಿಸಿದರು.