ವಳಲಂಬೆ: 23ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ| ‘ಸಂಸ್ಕೃತಿ, ಸಂಪ್ರದಾಯಗಳ ಪಾಲನೆ ಅತ್ಯಗತ್ಯ’ – ಎ.ಟಿ ಕುಸುಮಾಧರ

ಗುತ್ತಿಗಾರು: ‘ಗಣೇಶ ತತ್ವಗಳನ್ನು ಮೈಗೂಡಿಸಿಕೊಂಡಾಗ ಸಮಾಜದಲ್ಲಿ ‌ಉತ್ತಮ‌ ವ್ಯಕ್ತಿಯಾಗಲು ಸಾಧ್ಯ. ಭಾರತೀಯ ಕುಟುಂಬ ‌ಪದ್ದತಿ, ಸಂಸ್ಕೃತಿ, ಸಂಪ್ರದಾಯಗಳ ಪಾಲನೆ ಇಂದಿನ ಸಮಾಜದಲ್ಲಿ ಅಗತ್ಯವಿದೆ’ ಎಂದು ಸುಳ್ಯ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಎ.ಟಿ‌ ಕುಸುಮಾಧರ ಅಭಿಪ್ರಾಯಪಟ್ಟರು.

ಅವರು ವಳಲಂಬೆಯಲ್ಲಿ ನಡೆದ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆದ 23ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಣೇಶೋತ್ಸವ ಸಮಿತಿ ಅಧ್ಯಕ್ಷ ರವೀಂದ್ರ ಬಲ್ನಾಡು ವಹಿಸಿದ್ದರು. ವೇದಿಕೆಯಲ್ಲಿ ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ರುಗಳಾದ ಬಿ.ಕೆ ಬೆಳ್ಯಪ್ಪ ಗೌಡ, ಕೇಶವ ಹೊಸೊಳಿಕೆ,ಗಣೇಶೋತ್ಸವ ಸಮಿತಿ ಪೂರ್ವಾಧ್ಯಕ್ಷ ವೆಂಕಟ್ ವಳಲಂಬೆ, ನಿಕಟ ಪೂರ್ವ ಕಾರ್ಯದರ್ಶಿ ಹರಿಶ್ಚಂದ್ರ ಕೇಪಳಕಜೆ, ವಳಲಂಬೆ, ಉಪಸ್ಥಿತರಿದ್ದರು.

ಗಣೇಶೋತ್ಸವ ಸಮಿತಿಯ ಕೋಶಾಧಿಕಾರಿ ಮಾಧವ ಮೂಕಮಲೆ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿ, ಕಾರ್ಯದರ್ಶಿ ದಯಾನಂದ ಕನ್ನಡ್ಕ ವಂದಿಸಿದರು. ಸಂದೀಪ್ ಮೊಟ್ಟೆಮನೆ ನಿರೂಪಿಸಿದರು.