ಕ್ರೈಮ್‌ – Sullia Samagra Samachara https://sullia.samagrasamachara.com Samagra Media Network Thu, 06 Aug 2026 10:27:15 +0000 en-US hourly 1 https://wordpress.org/?v=7.0.3 https://sullia.samagrasamachara.com/wp-content/uploads/2024/07/cropped-logo-samagra-32x32.jpg ಕ್ರೈಮ್‌ – Sullia Samagra Samachara https://sullia.samagrasamachara.com 32 32 235500897 ಸಂಪಾಜೆ: ಕಾಡು ಪ್ರಾಣಿ ಹತ್ಯೆ ಮಾಡಿ ಮಾಂಸ ಮಾರಾಟ|ಇಬ್ಬರ ಬಂಧನ; ಓರ್ವ ಪರಾರಿ https://sullia.samagrasamachara.com/2026/08/06/news-one-324/ Thu, 06 Aug 2026 10:27:15 +0000 https://sullia.samagrasamachara.com/?p=72002 ಸಂಪಾಜೆ: ಇಲ್ಲಿನ ಚೆಂಬು ಅರಣ್ಯ ವಲಯದಲ್ಲಿ ಕಾಡು ಪ್ರಾಣಿಯೊಂದನ್ನು ಬೇಟೆಯಾಡಿ ಹತ್ಯೆ ಮಾಡಿ ಮಾಂಸ ಮಾಡಿದ 2 ಮಂದಿ ಆರೋಪಿಗಳನ್ನು ಕೊಡಗು ಕೊಯನಾಡು ಅರಣ್ಯವಲಯ ಇಲಾಖೆ ವಶಕ್ಕೆ ಪಡೆದ ಘಟನೆ ಆ.5 ರಂದು ನಡೆದಿದೆ.

ಆರೋಪಿಗಳನ್ನು ಗೌತಮ್ ಚೆಂಬು , ಶರತ್ ಪೆರಾಜೆ , ಹಾಗೂ ಯತಿನ್ ಕಾಡುಪಂಜ ಎಂದು ಗುರುತಿಸಲಾಗಿದೆ. ಆರೋಪಿಗಳು ಕೊಡಗು ವ್ಯಾಪ್ತಿಗೆ ಒಳಪಟ್ಟ ಚೆಂಬು ಅರಣ್ಯದ ಕಾಡುಪಂಜ ಎಂಬಲ್ಲಿ ಕಾಡುಕೋಣವನ್ನು ಕೋವಿಯಿಂದ ಬೇಟೆಯಾಡಿ ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ . ಬಳಿಕ ಮಾಸವನ್ನು ಪ್ಲಾಸ್ಟಿಕ್ ನಲ್ಲಿ ಕಟ್ಟಿ ಕೆ. ಎ 12 ರಿಜಿಸ್ಟ್ರೇಷನ್ ನ ಇಕೋ ಕಾರಿನ ಮೂಲಕ ಕಲ್ಲುಗುಂಡಿಯ ಕೈಪಡ್ಕ ಬಳಿ ತಲುಪಿದ್ದು, ಅರಣ್ಯ ಇಲಾಖೆಯ ಚುರುಕಿನ ದಾಳಿಯಿಂದ ಕಾರನ್ನು ಅಡ್ಡಗಟ್ಟಿ ಮಾಂಸ ,ಕೋವಿ ಹಾಗೂ ಕಾರು ಸಮೇತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ ಮೂರನೇ ಆರೋಪಿ ಯತಿನ್ ಕಾಡುಪಂಜ ತಲೆಮರೆಸಿಕೊಂಡಿದ್ದು ಆರೋಪಿಗೆ ಶೋಧ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂದರ್ಭದಲ್ಲಿ ಎ.ಸಿ. ಎಫ್ ಸೆಂದಿಲ್ ಕುಮಾರ್ (IFS) ವಲಯ ಅರಣ್ಯಧಿಕಾರಿ ಶ್ರೀಮತಿ ಡಿನ್ಸಿ ದೇಚಮ್ಮ, ಉಪ ವಲಯ ಅರಣ್ಯಧಿಕಾರಿ ಶ್ರೀಮತಿ ಶ್ರೀರಕ್ಷಾ, ಸುರೇಶ್, ಸಂದೀಪ್ ಗೌಡ, ವಿಜೇಂದ್ರ ಕುಮಾರ್, ವಿನಯ ಕೃಷ್ಣ ಹಾಗೂ ಸಂಪಾಜೆ ವಲಯದ ಗಸ್ತು ಅರಣ್ಯ ಪಾಲಕ ಯಮನೂರಿ ಕೊಳೂರು, ಕಾರ್ತಿಕ್. ಡಿ, ಸಿದ್ದೇಶ್, ನಾಗರಾಜ್. ಎಸ್, ಸಿದ್ರಾಮ್ ನಾಟಿಕಾರ್, ಶ್ರೀಕಾಂತ್ ಬಿರಾದಾರ್ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

]]>
72002
ಚೆಂಬು ಅರಣ್ಯ ವಲಯದಲ್ಲಿ ಕಾಡು ಪ್ರಾಣಿಯೊಂದನ್ನು ಬೇಟೆಯಾಡಿ ಹತ್ಯೆ ಮಾಡಿ ಮಾಂಸ ಮಾಡಿದ 2 ಮಂದಿ ಆರೋಪಿಗಳನ್ನು ಕೊಡಗು ಕೊಯನಾಡು ಅರಣ್ಯವಲಯ ಇಲಾಖೆ ವಶಕ್ಕೆ ಪಡೆದ ಘಟನೆ ಆ.5 ರಂದು ನಡೆದಿದೆ. https://sullia.samagrasamachara.com/2026/08/06/news-one-323/ Thu, 06 Aug 2026 10:00:47 +0000 https://sullia.samagrasamachara.com/?p=71997 ಆರೋಪಿಗಳನ್ನು ಗೌತಮ್ ಚೆಂಬು , ಶರತ್ ಪೆರಾಜೆ , ಹಾಗೂ ಯತಿನ್ ಕಾಡುಪಂಜ ಎಂದು ಗುರುತಿಸಲಾಗಿದೆ. ಆರೋಪಿಗಳು ಕೊಡಗು ವ್ಯಾಪ್ತಿಗೆ ಒಳಪಟ್ಟ ಚೆಂಬು ಅರಣ್ಯದ ಕಾಡುಪಂಜ ಎಂಬಲ್ಲಿ ಕಾಡುಕೋಣವನ್ನು ಕೋವಿಯಿಂದ ಬೇಟೆಯಾಡಿ ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ . ಬಳಿಕ ಮಾಸವನ್ನು ಪ್ಲಾಸ್ಟಿಕ್ ನಲ್ಲಿ ಕಟ್ಟಿ ಕೆ. ಎ 12 ರಿಜಿಸ್ಟ್ರೇಷನ್ ನ ಇಕೋ ಕಾರಿನ ಮೂಲಕ ಕಲ್ಲುಗುಂಡಿಯ ಕೈಪಡ್ಕ ಬಳಿ ತಲುಪಿದ್ದು, ಅರಣ್ಯ ಇಲಾಖೆಯ ಚುರುಕಿನ ದಾಳಿಯಿಂದ ಕಾರನ್ನು ಅಡ್ಡಗಟ್ಟಿ ಮಾಂಸ ,ಕೋವಿ ಹಾಗೂ ಕಾರು ಸಮೇತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ ಮೂರನೇ ಆರೋಪಿ ಯತಿನ್ ಕಾಡುಪಂಜ ತಲೆಮರೆಸಿಕೊಂಡಿದ್ದು ಆರೋಪಿಗೆ ಶೋಧ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂದರ್ಭದಲ್ಲಿ ಎ.ಸಿ. ಎಫ್ ಸೆಂದಿಲ್ ಕುಮಾರ್ (IFS) ವಲಯ ಅರಣ್ಯಧಿಕಾರಿ ಶ್ರೀಮತಿ ಡಿನ್ಸಿ ದೇಚಮ್ಮ, ಉಪ ವಲಯ ಅರಣ್ಯಧಿಕಾರಿ ಶ್ರೀಮತಿ ಶ್ರೀರಕ್ಷಾ, ಸುರೇಶ್, ಸಂದೀಪ್ ಗೌಡ, ವಿಜೇಂದ್ರ ಕುಮಾರ್, ವಿನಯ ಕೃಷ್ಣ ಹಾಗೂ ಸಂಪಾಜೆ ವಲಯದ ಗಸ್ತು ಅರಣ್ಯ ಪಾಲಕ ಯಮನೂರಿ ಕೊಳೂರು, ಕಾರ್ತಿಕ್. ಡಿ, ಸಿದ್ದೇಶ್, ನಾಗರಾಜ್. ಎಸ್, ಸಿದ್ರಾಮ್ ನಾಟಿಕಾರ್, ಶ್ರೀಕಾಂತ್ ಬಿರಾದಾರ್ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

]]>
71997
ಪೆರಾಜೆ: ಮಾದವ ಪೆರುಮುಂಡ ಅಸೌಖ್ಯದಿಂದ ನಿಧನ  https://sullia.samagrasamachara.com/2026/07/30/news-one-318/ Thu, 30 Jul 2026 02:17:04 +0000 https://sullia.samagrasamachara.com/?p=71979 ಮಡಿಕೇರಿ ತಾಲೂಕು ಪೆರಾಜೆ ಗ್ರಾಮದ ಪೆರುಮುಂಡ ಪಿ. ಯಂ  ಮಾದವ ಅವರು ಅಸೌಖ್ಯದಿಂದ ಬುಧವಾರ ನಿಧನರಾದರು.

ಅವರಿಗೆ  73 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಪುತ್ರ ಯತೀಶ, ಮೂವರು ಪುತ್ರಿಯರನ್ನು , ಅಳಿಯಂದಿರನ್ನು ಹಾಗೂ ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.

]]>
71979
ಕಾರು – ಬೈಕ್ ನಡುವೆ ಅಪಘಾತ; ಸವಾರ ಸಾವು https://sullia.samagrasamachara.com/2026/07/23/aranthodu-accident-news/ Thu, 23 Jul 2026 12:54:55 +0000 https://sullia.samagrasamachara.com/?p=71969 ಸುಳ್ಯ: ಇಲ್ಲಿನ ಅರಂತೋಡು ಕುಲ್ಚಾರ್ ಸಮೀಪ ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ. ಗಂಭೀರ ಗಾಯಗೊಂಡು ಮೃತಪಟ್ಟ ಬೈಕ್ ಸವಾರ ವಿದ್ಯಾರ್ಥಿಯನ್ನು ಅರಂತೋಡು ಗ್ರಾಮದ ಬಿಳಿಯಾರು ಬನ ಸುಬ್ರಾಯ ಅವರ ಮಗ ಸಂತೋಷ್ (17 ವರ್ಷ) ಎಂದು ಗುರುತಿಸಲಾಗಿದೆ.

ಸಂತೋಷ್ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ ಓದುತ್ತಿದ್ದರು. ಇಲ್ಲಿನ ಕುಲ್ಚಾರ್ ಸಮೀಪ ಬೈಕ್ ಮತ್ತು ಕಾರು ನಡುವೆ ಬುಧವಾರ ದಂದು ರಾತ್ರಿ ಅಪಘಾತ ಸಂಭವಿಸಿದೆ. ಈ ವೇಳೆ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಸಂತೋಷ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಗಾಯಾಳುವನ್ನು‌ ಶರತ್ ಅಡ್ಯಡ್ಕ ಅವರು ಸ್ಥಳೀಯರ ಸಹಕಾರದಿಂದ ಸುಳ್ಯದ ಖಾಸಗಿ ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿದ್ದರು.

]]>
71969
ಸಂಪಾಜೆ: ವಿವಾಹಿತೆ ಅನುಮಾನಾಸ್ಪದ ಸಾವು ಪ್ರಕರಣ; ಮೂವರ ಬಂಧನ https://sullia.samagrasamachara.com/2026/07/23/sampaje-crime-news/ Thu, 23 Jul 2026 12:50:26 +0000 https://sullia.samagrasamachara.com/?p=71966 ಸಂಪಾಜೆ: ಕೌಟುಂಬಿಕ ಕಿರುಕುಳ ಹಾಗೂ ಮನಸ್ತಾಪದ ಹಿನ್ನೆಲೆಯಲ್ಲಿ ವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣದಲ್ಲಿ, ಆಕೆಯನ್ನು ಕೊಲೆ ಮಾಡಲಾಗಿದೆ ಎಂಬ ದೂರಿನ ಮೇರೆಗೆ ಮೃತಳ ಮಾವ, ಅತ್ತೆ ಹಾಗೂ ನಾದಿನಿಯನ್ನು ಸುಳ್ಯ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಪುತ್ತೂರು ತಾಲೂಕಿನ ಕೆದಂಬಾಡಿ ನಿವಾಸಿ ಜುಬೈದಾ ಅವರ ಮಗಳು ಫಾತಿಮತ್‌ ನಿಶಾನ ಮೃತಪಟ್ಟ ವಿವಾಹಿತೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಮಾವ ಸಿ.ಪಿ. ಅಲವಿ , ಅತ್ತೆ ಅಯಿಷಾ ಸಿ.ಎ. ಹಾಗೂ ನಾದಿನಿ ಫಸಿಲಾ ಸಿ.ಎ. ಎಂಬುವರನ್ನು ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ಫಾತಿಮತ್‌ ನಿಶಾನ ಅವರ ವಿವಾಹ ನೆರವೇರಿತ್ತು. ಜುಲೈ 18ರ ರಾತ್ರಿ ನಿಶಾನ ತಮ್ಮ ತಾಯಿ ಜುಬೈದಾ ಅವರಿಗೆ ಫೋನ್ ಮಾಡಿ, “ಗಂಡನ ಮನೆಯಲ್ಲಿ ಮಾವ, ಅತ್ತೆ ಹಾಗೂ ನಾದಿನಿ ಮಾನಸಿಕ ಮತ್ತು ದೈಹಿಕವಾಗಿ ತೀವ್ರ ಕಿರುಕುಳ ನೀಡುತ್ತಿದ್ದಾರೆ” ಎಂದು ಅಳಲು ತೋಡಿಕೊಂಡಿದ್ದರು. ತಾಯಿ-ಮಗಳ ಸಂಭಾಷಣೆ ನಡೆಯುತ್ತಿದ್ದಂತೆಯೇ ಮಧ್ಯ ಪ್ರವೇಶಿಸಿದ ಮಾವ ಅಲವಿ, ನಿಶಾನ ಕೈಯಿಂದ ಫೋನ್ ಕಸಿದುಕೊಂಡು, “ನಿನ್ನ ಮಗಳನ್ನು ಕೊಲ್ಲುತ್ತೇನೆ” ಎಂದು ತಾಯಿ ಜುಬೈದಾ ಅವರಿಗೆ ಜೀವ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ಕರೆ ಬೆನ್ನಲ್ಲೇ ಆತಂಕಗೊಂಡ ತಾಯಿ ಜುಬೈದಾ ಮಗಳನ್ನು ನೋಡಲು ಆಕೆಯ ಮನೆಗೆ ಹೊರಟಾಗ, ನಿಶಾನ ಮೃತಪಟ್ಟಿರುವ ಸುದ್ದಿ ತಿಳಿದುಬಂದಿದೆ. ಕೌಟುಂಬಿಕ ಕಿರುಕುಳ ನೀಡಿ ಆರೋಪಿಗಳು ಸೇರಿಕೊಂಡೇ ಮಗಳನ್ನು ಹತ್ಯೆ ಮಾಡಿದ್ದಾರೆ ಎಂದು ತಾಯಿ ಜುಬೈದಾ ಸುಳ್ಯ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಕೊಲೆ ಹಾಗೂ ಗೃಹ ಹಿಂಸಾಚಾರ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಜುಲೈ 22ರಂದು ಮೂವರನ್ನು ದಸ್ತಗಿರಿ ಮಾಡಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ತಿಳಿಸಿದ್ದಾರೆ.

]]>
71966
ನಿಧನ: ಶ್ರೀಮತಿ ಅಕ್ಕಯ್ಯ ಆರ್ನೋಜಿ https://sullia.samagrasamachara.com/2026/07/22/death-news-akkaiah-arnoji/ Wed, 22 Jul 2026 02:57:01 +0000 https://sullia.samagrasamachara.com/?p=71963 ಗುತ್ತಿಗಾರು: ಇಲ್ಲಿನ ವಳಲಂಬೆ ಸಮೀಪದ ದಿ. ಆರ್ನೋಜಿ ಕೃಷ್ಣಪ್ಪ ಗೌಡರ ಧರ್ಮಪತ್ನಿ ಶ್ರೀಮತಿ ಅಕ್ಕಯ್ಯರವರು ಅಸೌಖ್ಯದಿಂದ ಜು. 21 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 97 ವರ್ಷ ವಯಸ್ಸಾಗಿತ್ತು.

ಮೃತರು ಪುತ್ರರಾದ ಸಾಹಿತಿ ಎ.ಕೆ. ಹಿಮಕರ, ಪ್ರಗತಿಪರ ಕೃಷಿಕರಾದ ರಾಘವ, ಗೋಪಾಲಕೃಷ್ಣ, ಪುತ್ರಿಯರಾದ ತಾರಾವತಿ, ಭವಾನಿ, ಹೇಮಾವತಿ, ಸೊಸೆ, ಅಳಿಯಂದಿರು,ಮೊಮ್ಮಕ್ಕಳನ್ನು, ಮರಿಮಕ್ಕಳನ್ನು, ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.

]]>
71963
ಸಂಪಾಜೆಯಲ್ಲಿ ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು| ಗಂಡ ಹಾಗೂ ಮನೆಯವರ ವಿರುದ್ಧ ದೂರು ದಾಖಲು https://sullia.samagrasamachara.com/2026/07/20/sampaje-married-woman-died/ Mon, 20 Jul 2026 16:26:21 +0000 https://sullia.samagrasamachara.com/?p=71960 ಸುಳ್ಯ: ತಾಲೂಕಿನ‌ ಸಂಪಾಜೆ‌ ಸಮೀಪದ ಕಡೆಪಾಲದಲ್ಲಿ ನಡೆದ 22 ವರ್ಷದ ಯುವತಿಯ ಅನುಮಾನಾಸ್ಪದ ಸಾವು ಇದೀಗ ಭಾರಿ ಕುತೂಹಲ ಹಾಗೂ ಅನುಮಾನಗಳಿಗೆ ಕಾರಣವಾಗಿದ್ದು ಈ ಹಿನ್ನೆಲೆಯಲ್ಲಿ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿಗೆ ಕಳಿಸಿದ್ದಾರೆ.

ಕಡೆಪಾಲ ಅಲಿಗುಡ್ಡೆಯ ನಿವಾಸಿ ಅಲವಿಕುಟ್ಟಿ ಎಂಬವರ ಪುತ್ರ ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಅನ್ಸಾರ್ ಎಂಬವರ ಪತ್ನಿ ಫಾತಿಮತ್ ನಿಶಾನ(22) ಮೃತಪಟ್ಟ ಮಹಿಳೆ. ಮೃತದೇಹವನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆತರಲಾಗಿತ್ತು, ಬಳಿಕ ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಜುಲೈ 18ರ ರಾತ್ರಿ ಫಾತಿಮತ್ ನಿಶಾನ (22) ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ನಿಶಾನ ಅವರಿಗೆ ನಾಲ್ಕು ವರ್ಷಗಳ ಹಿಂದೆ ಅನ್ಸಾರ್ ಜೊತೆ ವಿವಾಹವಾಗಿತ್ತು. ಈ ದಂಪತಿಗೆ ಎರಡೂವರೆ ವರ್ಷದ ಪುತ್ರನಿದ್ದಾನೆ. ಫಾತಿಮತ್ ನಿಶಾನ ಗಂಡನ ಕುಟುಂಬವು ಮೊದಲು ದೇವರಕೊಲ್ಲಿಯಲ್ಲಿ ವಾಸಿಸುತ್ತಿದ್ದು ಇದೀಗ ಕೆಲವು ವರ್ಷಗಳಿಂದ ಸಂಪಾಜೆಯಲ್ಲಿ ನೆಲೆಸಿದ್ದರು.

ಘಟನೆಯ ದಿನ ರಾತ್ರಿ ಫಾತಿಮತ್ ನಿಶಾನ ತಮ್ಮ ತಾಯಿಗೆ ಕರೆ ಮಾಡಿ, ‘ಗಂಡನ ಮನೆಯಲ್ಲಿ ನನಗೆ ತೀವ್ರ ಕಿರುಕುಳ ನೀಡುತ್ತಿದ್ದಾರೆ’ ಎಂದು ತಿಳಿಸಿದ್ದರು. ಮಗಳ ಕರೆ ಬಂದ ತಕ್ಷಣ ತಾಯಿ ಜುಬೈದಾ ಕುಂಬ್ರದಿಂದ ಆಟೋದಲ್ಲಿ ಮಗಳ ಮನೆಗೆ ಧಾವಿಸಿದ್ದಾರೆ. ಆದರೆ, ತಾಯಿ ಮನೆ ತಲುಪುವಷ್ಟರಲ್ಲಿ ನಿಶಾನ ಮೃತಪಟ್ಟ ಸ್ಥಿತಿಯಲ್ಲಿದ್ದರು. ಸ್ನಾನಗೃಹದ ಶವರ್‌ಗೆ ನೇಣು ಬಿಗಿದುಕೊಂಡು ನಿಶಾನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗಂಡನ ಮನೆಯವರು ಹೇಳುತ್ತಿದ್ದಾರೆ. ಆದರೆ ಈ ವಾದವನ್ನು ನಿಶಾನ ಕುಟುಂಬಸ್ಥರು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ.

‘ಇದು ಆತ್ಮಹತ್ಯೆಯಲ್ಲ, ಇದೊಂದು ವ್ಯವಸ್ಥಿತ ಕೊಲೆ’ ಎಂದು ಆರೋಪಿಸಿರುವ ಮೃತರ ತಾಯಿ ಹಾಗೂ ಸಹೋದರರು ಪೊಲೀಸ್ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಮೃತದೇಹವನ್ನು ಮಂಗಳೂರಿನ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಈ ಸಾವಿನ ನಿಜವಾದ ಕಾರಣ ಏನೆಂಬುದು ಹೊರಬರಬೇಕಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.

]]>
71960
ಎಣ್ಮೂರು: ಬಾಲಕಲಾವಿದ, ಹೈಸ್ಕೂಲ್ ವಿದ್ಯಾರ್ಥಿ ಹೃದಯಾಘಾತದಿಂದ ಸಾವು https://sullia.samagrasamachara.com/2026/07/06/yenmoor-student-died/ Mon, 06 Jul 2026 06:09:21 +0000 https://sullia.samagrasamachara.com/?p=71954 ನಿಂತಿಕಲ್ಲು: 9ನೇ ತರಗತಿಯ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕರಿಂಬಿಲದಿಂದ ವರದಿಯಾಗಿದೆ. ಇಲ್ಲಿನ ನಿವಾಸಿ ಪೂರ್ಣಚಂದ್ರರವರ ಪುತ್ರ, ಎಣ್ಮೂರು ಹೈಸ್ಕೂಲಿನ ೯ನೇ ತರಗತಿ ವಿದ್ಯಾರ್ಥಿ ಶಿಶಿಲ್ ಹೃದಯಾಘತದಿಂದ ಮೃತಪಟ್ಟ ದುರ್ದೈವಿ.

ಕಳೆದ ಕೆಲವು ದಿನಗಳಿಂದ ಅಸೌಖ್ಯಕ್ಕೊಳಗಾಗಿದ್ದ ಶಿಶಿಲ್ ಕಾಣಿಯೂರು, ಪುತ್ತೂರು, ಹಾಗೂ ಮಂಗಳೂರಿನ ಕೆಎಂಸಿ ಆಸ್ಪತ್ರೆಗಳಲ್ಲಿ ಒಳರೋಗಿಯಾಗಿ ದಾಖಲಾಗಿ ನಂತರ ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ನಿರ್ಧರಿಸಲಾಗಿತ್ತು. ಜು.೬ರಂದು ಬೆಂಗಳೂರಿಗೆ ಹೋಗಲು ತೀರ್ಮಾನಿಸಲಾಗಿದ್ದು, ಜು.೫ರಂದು ರಾತ್ರಿ ತೀವ್ರ ಅಸೌಖ್ಯಕ್ಕೊಳಗಾದರು. ರಾತ್ರಿಯೇ ಚಿಕಿತ್ಸೆಗೆಂದು ಪುತ್ತೂರಿಗೆ ಕರೆದೊಯ್ಯುವ ವೇಳೆ ಶಿಶಿಲ್ ಹೃದಯಾಘಾತದಿಂದ ಮೃತಪಟ್ಟನೆಂದು ತಿಳಿದು ಬಂದಿದೆ.

ಶಿಶಿಲ್ ತಂದೆ, ತಾಯಿ ಕವಿತಾ, ಸಹೋದರ ಗಾಯನ್, ಕುಟುಂಬಸ್ಥರನ್ನು, ಬಂಧುಗಳನ್ನು ಅಗಲಿದ್ದಾನೆ. ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಶಿಶಿಲ್ ಯಕ್ಷಗಾನ ಹಾಗೂ ನಾಟಕ ಕಲಾವಿದನಾಗಿದ್ದ. ಶಿಶಿಲ್ ಅಗಲುವಿಕೆಯಿಂದ ಆಪ್ತವರ್ಗ ಮರುಗಿದೆ.

]]>
71954
ನಿಧನ: ಲಲಿತ ಬೆಂಡೋಡಿ https://sullia.samagrasamachara.com/2026/05/21/news-one-309/ Thu, 21 May 2026 05:33:51 +0000 https://sullia.samagrasamachara.com/?p=71922 ಕೊಲ್ಲಮೊಗ್ರು: ಇಲ್ಲಿನ ಬೆಂಡೋಡಿಯಲ್ಲಿರುವ ಹರಿಹರಮನೆ ಲಲಿತ 65 ವರ್ಷ ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದರು. ಮೃತರು ಅವಿವಾಹಿತರಾಗಿದ್ದು ಸಹೋದರ ಸೇರಿದಂತೆ ಬಂಧುಗಳನ್ನು ಅಗಲಿದ್ದಾರೆ

]]>
71922
ಮರ್ಕಂಜ: ಮಗನಿಗೆ ತಾಯಿಯಿಂದಲೇ ಕತ್ತಿಯೇಟು| ಗಾಯಾಳು ಆಸ್ಪತ್ರೆಗೆ ದಾಖಲು https://sullia.samagrasamachara.com/2026/04/30/news-one-306/ Thu, 30 Apr 2026 02:27:01 +0000 https://sullia.samagrasamachara.com/?p=71914 ಸುಳ್ಯ: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿ, ತಾಯಿಯೇ ಮಗನಿಗೆ ಕತ್ತಿಯಿಂದ ಕಡಿದು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಹೈದಂಗೂರು ಎಂಬಲ್ಲಿ ವರದಿಯಾಗಿದೆ.

ಏಪ್ರಿಲ್ 26ರಂದು ರಾತ್ರಿ ಈ ಘಟನೆ ನಡೆದಿದ್ದು, ಹೈದಂಗೂರು ನಿವಾಸಿ ರಾಮಚಂದ್ರ ಗಾಯಗೊಂಡವರು. ಇವರ ತಾಯಿ ಯಶೋದಾ ಕೃತ್ಯ ಎಸಗಿದವರು ಎಂದು ಗುರುತಿಸಲಾಗಿದೆ.

ರಾತ್ರಿ ಮಗ ರಾಮಚಂದ್ರ ಅಮಲು ಪದಾರ್ಥ ಸೇವಿಸಿ ಮನೆಗೆ ಬಂದಿದ್ದರು ಎನ್ನಲಾಗಿದೆ. ಈ ವೇಳೆ ತಾಯಿ ಮತ್ತು ಮಗನ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಜಗಳ ತಾರಕಕ್ಕೇರಿದ ಸಂದರ್ಭದಲ್ಲಿ ಆಕ್ರೋಶಗೊಂಡ ತಾಯಿ ಮನೆಯಲ್ಲಿದ್ದ ಕತ್ತಿಯಿಂದ ಮಗನಿಗೆ ಕಡಿದಿದ್ದಾರೆ ಎಂದು ತಿಳಿದು ಬಂದಿದೆ.

ಕತ್ತಿ ಏಟಿನಿಂದ ತೀವ್ರವಾಗಿ ಗಾಯಗೊಂಡ ರಾಮಚಂದ್ರ ಅವರನ್ನು ತಕ್ಷಣವೇ ಸುಳ್ಯದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

]]>
71914