ಇತರೆ – Sullia Samagra Samachara https://sullia.samagrasamachara.com Samagra Media Network Sat, 28 Feb 2026 16:25:51 +0000 en-US hourly 1 https://wordpress.org/?v=7.0.3 https://sullia.samagrasamachara.com/wp-content/uploads/2024/07/cropped-logo-samagra-32x32.jpg ಇತರೆ – Sullia Samagra Samachara https://sullia.samagrasamachara.com 32 32 235500897 ನಾಳೆ(ಮಾ.1) ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಭೇಟಿ https://sullia.samagrasamachara.com/2026/02/28/hd-devegowda-visiting-kukke/ Sat, 28 Feb 2026 16:25:51 +0000 https://sullia.samagrasamachara.com/?p=71855 ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರು ಭೇಟಿ ನೀಡಲಿದ್ದಾರೆ. ನಾಳೆ ಸಂಜೆ 5.20ಕ್ಕೆ ಹೆಲಿಕಾಫ್ಟರ್‌ ಮೂಲಕ ಬೆಂಗಳೂರಿನಿಂದ ಆಗಮಿಸಿ ಬಿಳಿನೆಲೆ ಹೆಲಿಪ್ಯಾಡ್‌ನ‌ಲ್ಲಿ ಬಂದಿಳಿಯುವರು.

ಬಿಳಿನೆಲೆಯಿಂದ ರಸ್ತೆ ಮಾರ್ಗದ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವರು. 6 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸುವರು. ಅಂದು ರಾತ್ರಿ ಸುಬ್ರಹ್ಮಣ್ಯದ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು. ಮಾ.2ರಂದು ಬೆಳಗ್ಗೆ 6 ಗಂಟೆಗೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸುವರು.

ಮಧ್ಯಾಹ್ನ 2.30ಕ್ಕೆ ಸುಬ್ರಹ್ಮಣ್ಯದಿಂದ ರಸ್ತೆ ಮಾರ್ಗದ ಮೂಲಕ ಬಿಳಿನೆಲೆ ಹೆಲಿಪ್ಯಾಡ್‌ಗೆ ತೆರಳಿ 3 ಗಂಟೆಗೆ ಹೆಲಿಕಾಪ್ಟರ್‌ ಮೂಲಕ ಬೆಂಗಳೂರಿಗೆ ನಿರ್ಗಮಿಸುವರು. ಪ್ರವಾಸದ ವೇಳೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ಝಡ್‌ ಪ್ಲಸ್‌ ಭದ್ರತೆ ಇರಲಿದೆ.

]]>
71855
ಫೆ.15: ವೆಂಕಟರಮಣ ಸೊಸೈಟಿಯ 24ನೇ ಮೂರ್ನಾಡು ಶಾಖೆ ಉದ್ಘಾಟನೆ https://sullia.samagrasamachara.com/2026/02/14/svccs-new-branch-innaguration-at-murnad/ Sat, 14 Feb 2026 04:01:09 +0000 https://sullia.samagrasamachara.com/?p=71833 ಸುಳ್ಯ: ಇಲ್ಲಿನ ಗೌಡರ ಯುವ ಸೇವಾ ಸಂಘದಿಂದ ಪ್ರವರ್ತಿಸಲ್ಪಡುತ್ತಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಇದರ ನೂತನ 24ನೇ ಮೂರ್ನಾಡು ಶಾಖೆ ಫೆ.15 ರಂದು ಉದ್ಘಾಟನೆಗೊಳ್ಳಲಿದೆ ಎಂದು ಸೊಸೈಟಿಯ ಅಧ್ಯಕ್ಷ ಕೆ.ಸಿ.ಸದಾನಂದ ತಿಳಿಸಿದ್ದಾರೆ.

ಮಡಿಕೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಭಾನುವಾರ ಬೆಳಿಗ್ಗೆ 10.30 ಗಂಟೆಗೆ ಮೂರ್ನಾಡಿನಲ್ಲಿ 24ನೇ ಶಾಖೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಉದ್ಘಾಟಿಸಲಿದ್ದಾರೆ ಎಂದರು.

ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಲಿದ್ದಾರೆ. ಭದ್ರತಾ ಕೊಠಡಿಯನ್ನು ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಹಾಗೂ ಗಣಕೀಕರಣವನ್ನು ಮೂರ್ನಾಡು ವರ್ತಕರ ಸಂಘದ ಅಧ್ಯಕ್ಷ ಅರುಣ್ ಅಪ್ಪಚ್ಚು ಬಡವಂಡ ಉದ್ಘಾಟಿಸಲಿದ್ದಾರೆ. ಪ್ರಥಮ ಪಾಲುಪತ್ರವನ್ನು ಮೂರ್ನಾಡು ಗೌಡ ಸಮಾಜದ ಅಧ್ಯಕ್ಷ ಪಾಣತ್ತಲೆ ಟಿ.ಹರೀಶ್, ಠೇವಣಿ ಪತ್ರವನ್ನು ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್‌ ನ ಉಪಾಧ್ಯಕ್ಷ ನವೀನ್ ಅಂಬೆಕಲ್ಲು ವಿತರಿಸಲಿದ್ದಾರೆ. ಪ್ರಥಮ ಉಳಿತಾಯ ಖಾತೆ ಪುಸ್ತಕವನ್ನು ಕಾಂತೂರು ಮೂರ್ನಾಡು ಗ್ರಾ.ಪಂ ಅಧ್ಯಕ್ಷ ಕುಶನ್ ರೈ ವಿತರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರ ಸಂಘದ ಮಾಜಿ ಅಧ್ಯಕ್ಷ ಕಂಬೀರಂಡ ಬಿ.ಕಾಳಪ್ಪ ಹಾಗೂ ಶ್ರೀ ವೆಂಕಟೇಶ್ವರ ಕಾಂಪ್ಲೆಕ್ಸ್ ನ ಮಾಲೀಕ ಕುಂತೋಡಿರ ದೇವಯ್ಯ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸಂಘವು ಪ್ರಾರಂಭದಿಂದಲೂ ಲಾಭದಲ್ಲಿ ನಡೆಯುತ್ತಿದ್ದು, ಈ ಸಹಕಾರಿ ವರ್ಷದಲ್ಲಿ ಸಂಘ ಹೆಚ್ಚಿನ ಪ್ರಗತಿ ಸಾಧಿಸಿದೆ. ಪ್ರಸ್ತುತ ಸಂಘದಲ್ಲಿ ರೂ.270 ಕೋಟಿ ಠೇವಣಿ ಇದ್ದು, ರೂ.256 ಕೋಟಿ ಸದಸ್ಯರುಗಳಿಗೆ ಸಾಲ ವಿತರಿಸಲಾಗಿದೆ. ರೂ.300 ಕೋಟಿ ದುಡಿಯುವ ಬಂಡವಾಳವಿದ್ದು, ಒಟ್ಟು ರೂ.1,300 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರವನ್ನು ನಡೆಸುತ್ತಿದ್ದೇವೆ ಎಂದು ಕೆ.ಸಿ.ಸದಾನಂದ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ದಿನೇಶ ಮಡಪ್ಪಾಡಿ, ನಿರ್ದೇಶಕರಾದ ಸದಾನಂದ ಮಾವಜಿ, ದಾಮೋದರ ನಾರ್ಕೋಡು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ, ಮಡಿಕೇರಿ‌ ಶಾಖಾ ವ್ಯವಸ್ಥಾಪಕ ಅಶೋಕ ಬಿ. ಉಪಸ್ಥಿತರಿದ್ದರು.

]]>
71833
ಸಂಪಾಜೆ: ಹಿಟ್ & ರನ್| ರಿಕ್ಷಾ ಚಾಲಕ ಸಾವು https://sullia.samagrasamachara.com/2026/01/29/sampaje-hit-and-run-driver-died/ Thu, 29 Jan 2026 10:25:46 +0000 https://sullia.samagrasamachara.com/?p=71793 ಸಂಪಾಜೆ: ಕಾರೊಂದು ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದು ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ ಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಗೇಟಿನ ಬಳಿ ಸಂಭವಿಸಿದೆ.

ರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು ಕೊಡಗು ಸಂಪಾಜೆ ಪೆಟ್ರೋಲ್‌ ಪಂಪ್‌ ಬಳಿಯ ತಿರುವಿನಲ್ಲಿ ಹಿಂದಿನಿಂದ ಬಂದ ಕಾರು ಗುದ್ದಿ ಪರಾರಿಯಾಗಿದೆ. ಘಟನೆಯಲ್ಲಿ ರಿಕ್ಷಾ ಚಾಲಕ ಸುಂದರ ಚಿಟ್ಟಿಕ್ಕಾನ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೋರ್ವ ಪ್ರಯಾಣಿಕನಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

]]>
71793
ಜ.30: ಈ ಭಾಗಗಳಲ್ಲಿ ಕರೆಂಟಿಲ್ಲ https://sullia.samagrasamachara.com/2026/01/28/power-cut-in-this-area/ Wed, 28 Jan 2026 12:32:28 +0000 https://sullia.samagrasamachara.com/?p=71789 ಸುಳ್ಯ: ಜ.30ನೇ ಶುಕ್ರವಾರದಂದು ಬೆಳ್ಳಾರೆ-ಗುತ್ತಿಗಾರು-ಸುಬ್ರಹ್ಮಣ್ಯ 33ಕೆವಿ ಮಾರ್ಗ ಮತ್ತು 33/11 ಕೆವಿ ಗುತ್ತಿಗಾರು ಮತ್ತು ಸುಬ್ರಹ್ಮಣ್ಯ ವಿದ್ಯುತ್ ಉಪ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

ಮುಂಜಾನೆ 10 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ಸುಬ್ರಹ್ಮಣ್ಯ ಉಪ ಕೇಂದ್ರದಿಂದ ಹೊರಡುವ ಹರಿಹರ, ನಡುಗಲ್ಲು, ಕುಮಾರಧಾರ, ಆದಿಶೇಷ, ಕೈಕಂಬ ಮತ್ತು ಏನೆಕಲ್ಲು, 11ಕೆವಿ ಫೀಡರ್ ಗಳಲ್ಲಿ ಹಾಗೂ ಗುತ್ತಿಗಾರು ಉಪ ಕೇಂದ್ರದಿಂದ ಹೊರಡುವ ಗುತ್ತಿಗಾರು, ಕೂತ್ಕುಂಜ, ಮಡಪ್ಪಾಡಿ, ಎಲಿಮಲೆ, ಮರ್ಕಂಜ ಮತ್ತು ಬಳ್ಪ 11ಕೆವಿ ಫೀಡರ್ ಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

]]>
71789
ಇಂದು ಸೈಂಟ್ ಬ್ರಿಜಿಡ್ಸ್ ಶಾಲೆ ಅಮೃತ ಮಹೋತ್ಸವ https://sullia.samagrasamachara.com/2026/01/20/amruthamahosthava-at-sullia-church-school/ Tue, 20 Jan 2026 05:03:49 +0000 https://sullia.samagrasamachara.com/?p=71780 ಸುಳ್ಯ: ಬೀರಮಂಗಲದಲ್ಲಿರುವ ಸೈಂಟ್ ಬ್ರಿಜಿಡ್ಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮ ಜ.20ರಂದು ಶಾಲಾ ವಠಾರದಲ್ಲಿ ನಡೆಯಲಿದೆ ಎಂದು ಸೈಂಟ್ ಬ್ರಿಜಿಡ್ಸ್ ಶಾಲಾ ಜತೆ ಕಾರ್ಯದರ್ಶಿ ಹಾಗೂ ಸೈಂಟ್ ಬ್ರಿಜಿಡ್ಸ್ ಚರ್ಚ್ ಧರ್ಮಗುರು ವಂ| ಒಲ್ವಿನ್ ಎಡ್ವರ್ಡ್ ಡಿಕುನ್ಹಾ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಳಗ್ಗೆ 9 ಗಂಟೆಗೆ ದಿವ್ಯಬಲಿ ಪೂಜೆ ಕಾರ್ಯಕ್ರಮ, 10.15ಕ್ಕೆ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ. ವಂ। ಒಲ್ವಿನ್ ಎಡ್ವರ್ಡ್ ಡಿ’ಕುನ್ಹಾ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಲೆಯ ಹಿರಿಯ ವಿದ್ಯಾರ್ಥಿಗಳಾದ ಎಸ್. ಎಂ. ಬಾಪೂಸಾಹೇಬ್, ನಗರ ಪಂಚಾಯತ್ ಮಾಜಿ ಸದಸ್ಯ ಡೇವಿಡ್ ಧೀರಾ ಕ್ರಾಸ್ತ, ಸುಳ್ಯ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕಿ ಶಹನಾಝ್, ಯಶ್ಚಿತ್ ಕಾಳಂಮನೆ, ಡಾ। ಸುನಿಧಿ ಎಸ್., ಚಲನಚಿತ್ರ ನಿರ್ದೇಶಕ ಮಯೂರ್‌ಅಂಬೆಕಲ್ಲು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಸಂಜೆ 4.30 ಅಮೃತಮಹೋತ್ಸವ ಸಮಾರಂಭ ನಡೆಯಲಿದೆ. ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತದ ಧರ್ಮಾಧ್ಯಕ್ಷ ಡಾ. ಪೀಟರ್ ಸಲ್ದಾನ್ಹಾ ವಹಿಸಲಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ, ಮಂಗಳೂರು ಕೆಥೋಲಿಕ್ ಶಿಕ್ಷಣ ಮಂಡಳಿ ಕಾರ್ಯದರ್ಶಿ ವಂ| ಪ್ರವೀಣ್ ಲಿಯೋ ಲಸ್ರಾದೊ, ಪದ್ಮಶ್ರೀ ಗಿರೀಶ್ ಭಾರದ್ವಾಜ್, ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ ಮುಸ್ತಫಾ, ಸೈಂಟ್ ಬ್ರಿಜಿಡ್ಸ್ ಶಾಲೆಯ ಹಿರಿಯ ವಿದ್ಯಾರ್ಥಿ, ಪ್ರಿನ್ಸಿಪಾಲ್ – ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ಅರ್ಶದ್ ಅನ್ಸಾರಿ ಅವರು ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಮಂಗಳೂರು ಪ್ರಾಂತ ಪ್ರಾಂತೀಯ ಮುಖ್ಯಸ್ಥೆ ಸಿಸ್ಟರ್‌ಕ್ಷೇರಾ ಮಿನೇಜಸ್, ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು. ಕೆ, ಚರ್ಚ್ ಪಾಲನ ಸಮಿತಿ ಉಪಾಧ್ಯಕ್ಷ ಸುನೀಲ್ ಮಸ್ಕರೇನಸ್, ಸೈಂಟ್ ಜೊಸೆಫ್ ಆಂಗ್ಲ ಮಾಧ್ಯಮ ಶಾಲಾ ಮುಖ್ಯಗುರು ಸಿಸ್ಟರ್‌ಮೇರಿ ಸ್ಟೆಲ್ಲಾ ಉಪಸ್ಥಿತರಿರುವರು ಎಂದು ಅವರು ತಿಳಿಸಿದರು.

ಗೋಷ್ಟಿಯಲ್ಲಿ ಬ್ರಿಜಿಡ್ಸ್ ಮುಖ್ಯ ಶಿಕ್ಷಕಿ ಸಿಸ್ಟರ್ ಆ್ಯಂಟಿನಿ ಮೇರಿ, ಪಾಲನ ಸಮಿತಿ ಉಪಾಧ್ಯಕ್ಷ ಸುನೀಲ್ ಮಸ್ಕರೇನಸ್, ಅಮೃತಮಹೋತ್ಸವ ಸಮಿತಿ ಅಧ್ಯಕ್ಷ ನವೀನ್ ಮಚಾದೋ ಉಪಸ್ಥಿತರಿದ್ದರು.

]]>
71780
ಸುಳ್ಯ: ರೋಟರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ|ಯುವ ಮನಸ್ಸುಗಳು ಎಚ್ಚೆತ್ತುಕೊಂಡಲ್ಲಿ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ: ಡಾ. ಅನುರಾಧ ಕುರುಂಜಿ https://sullia.samagrasamachara.com/2025/11/23/news-one-275/ Sun, 23 Nov 2025 09:23:17 +0000 https://sullia.samagrasamachara.com/?p=71666 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್( ರಿ) ಸುಳ್ಯ ತಾಲೂಕು, ಸುಳ್ಯ ವಲಯ ಗಾಂಧಿನಗರ ಕಾರ್ಯಕ್ಷೇತ್ರದ ವತಿಯಿಂದ ಆಲೆಟ್ಟಿ ಮಿತಡ್ಕ ರೋಟರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಭಾಗದ ಮಕ್ಕಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ. ಅನುರಾಧ ಕುರುಂಜಿಯವರು ಮಾತನಾಡಿ ಯುವ ಮನಸ್ಸುಗಳು ಎಚ್ಚೆತ್ತುಕೊಂಡಲ್ಲಿ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ ಎಂದರಲ್ಲದೇ ದುಶ್ಚಟಕ್ಕೆ ಬಲಿಯಾಗಿ ಅನುಭವಿಸುವ ಕಷ್ಟ ನಷ್ಟಗಳು ಮತ್ತು ದುಶ್ಚಟಕ್ಕೆ ಬಲಿಯಾದಾಗ ಕೌಟುಂಬಿಕ ಹಾಗೂ ಸಾಮಾಜಿಕ. ವಲಯಗಳಲ್ಲಾಗುವ ಸಮಸ್ಯೆಗಳನ್ನು ವಿವರವಾಗಿ ತಿಳಿಸಿದರು.

 ಸಾಮಾಜಿಕ ಜಾಲತಾಣಗಳಿಂದ ಆಗುವ ತೊಂದರೆಗಳ  ಕುರಿತು ಮಾಹಿತಿ ನೀಡಿದರು, ಎಲ್ಲಾ ವಿದ್ಯಾರ್ಥಿಗಳು ಗುರು ಹಿರಿಯರಿಗೆ ಗೌರವ ಕೊಡುವುದನ್ನು, ಜೀವನದಲ್ಲಿ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದನ್ನು ಕಲಿತಾಗ ಪಡೆದ ಶಿಕ್ಷಣ ಸಾರ್ಥಕವಾಗುತ್ತದೆ , ವಿದ್ಯಾರ್ಥಿಗಳು ಯಾವುದೇ ದುಶ್ಚಟಕ್ಕೆ ಬಲಿಯಾಗದೆ ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸವನ್ನು ಮುಂದುವರಿಸಿ ಸಮಾಜಕ್ಕೆ ಸ್ವಾಮಿ ವಿವೇಕಾನಂದರಂತೆ  ಆದರ್ಶ ವ್ಯಕ್ತಿ ಮತ್ತು ಉತ್ತಮ ಪ್ರಜೆ ಆಗಬೇಕೆಂದು ಹಾರೈಸಿದರು.

ವಲಯ ಮೇಲ್ವಿಚಾರಕರಾದ ದಿನೇಶ್ ರವರು ಪ್ರಾಸ್ತವಿಕವಾಗಿ ಯೋಜನೆಯ ಹಿನ್ನಲೆ, ಕಾರ್ಯಕ್ರಮದ ಧ್ಯೇಯ ಉದ್ದೇಶ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಪಿಯುಸಿ ನಂತರದ ವೃತ್ತಿಪರ ವಿದ್ಯಾಭ್ಯಾಸಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸುಜ್ಞಾನ ನಿಧಿ ಸೌಲಭ್ಯದ ಬಗ್ಗೆ, ಜ್ಞಾನದೀಪ ಶಿಕ್ಷಕರ ನೇಮಕದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ಆಲೆಟ್ಟಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವೀಣಾ ವಸಂತ್ ರವರು ಮಾಹಿತಿ ಮಾರ್ಗದರ್ಶನ ನೀಡಿದ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದರು. 

ಈ ಒಂದು ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿನಿಯಾದ ಯಶಸ್ವಿ ಪಿ. ಭಟ್ ರವರು ಪ್ರಾರ್ಥಿಸಿದರು, ಕಾಲೇಜು ಪ್ರಾಂಶುಪಾಲರಾದ ಶೋಭಾ ಬೊಮೆಟ್ಟಿಯವರು ಎಲ್ಲರನ್ನು ಸ್ವಾಗತಿಸಿದರು. ಸೇವಾ ಪ್ರತಿನಿಧಿ ಸೌಜನ್ಯ ಕಾರ್ಯಕ್ರಮವನ್ನು ನಿರೂಪಿಸಿದರು, ಸುಳ್ಯ ವಲಯದ ಮೇಲ್ವಿಚಾರಕರಾದ ದಿನೇಶ್ ರವರು ಎಲ್ಲರಿಗೂ ಧನ್ಯವಾದ ನೀಡಿದರು.

]]>
71666
ನಿವೃತ್ತ ಆರೋಗ್ಯಾಧಿಕಾರಿ ಡಾ. ನಂದಕುಮಾರ್ ಗೆ ಪುತ್ರ ವಿಯೋಗ| ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಆಸ್ತಿಕ್ https://sullia.samagrasamachara.com/2025/07/20/news-one-209/ Sun, 20 Jul 2025 13:24:37 +0000 https://sullia.samagrasamachara.com/?p=71299 ಸುಳ್ಯ: ನಿವೃತ್ತ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ರವರ ಪುತ್ರ , ಮಂಗಳೂರಿನ ಎ.ಬಿ.ಶೆಟ್ಟಿ ಡೆಂಟಲ್ ಕಾಲೇಜಿನಲ್ಲಿ ದಂತ ವಿಜ್ಞಾನ ಕಲಿಯುತ್ತಿದ್ದ ಆಸ್ತಿಕ್ ರಾಘವ್ ಇಂದು ಕೇರಳದ ಕಣ್ಣೂರಿನಲ್ಲಿ ಕೆರೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ

ಮಂಗಳೂರಿನಿಂದ ತನ್ನ ಸಹಪಾಠಿಯೊಂದಿಗೆ ಕೇರಳದ ಕಣ್ಣೂರಿನ ಆತನ ಮನೆಗೆ ಆಸ್ತಿಕ್ ಇಂದು ಬೆಳಿಗ್ಗೆ ಹೋಗಿದ್ದರೆನ್ನಲಾಗಿದೆ. ಬಳಿಕ ಅವರು ಮನೆ ಪಕ್ಕದ ಕೆರೆಗೆ ಸ್ನಾನಕ್ಕೆ ಹೋದಾಗ ಕಾಲು ಜಾರಿ ನೀರಲ್ಲಿ ಮುಳುಗಲ್ಪಟ್ಟು ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

]]>
71299
ನಿರಂತರ ಮಳೆ ಹಿನ್ನಲೆ| ಕಡಬ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ಇಂದು(ಜು.15) ರಜೆ ಘೋಷಣೆ https://sullia.samagrasamachara.com/2025/07/15/rain-holiday-to-kadaba-taluk/ Tue, 15 Jul 2025 02:59:32 +0000 https://sullia.samagrasamachara.com/?p=71288 ಕಡಬ: ಕಳೆದ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿರುವುದರಿಂದಾಗಿ ಕಡಬ ತಾಲೂಕಿನ ಶಾಲೆಗಳಿಗೆ ಜು.15ರ ಮಂಗಳವಾರದಂದು ರಜೆ ಘೋಷಿಸಲಾಗಿದೆ.

ಕಡಬ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 15 ರಂದು ರಜೆ ಘೋಷಿಸಲಾಗಿದೆ ಎಂದು ಕಡಬ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

]]>
71288
ಕುಕ್ಕೆಯಲ್ಲಿ ಸಂಭ್ರಮದಿಂದ ಸಂಪನ್ನಗೊಂಡ ಬಿಸು ರಥೋತ್ಸವ https://sullia.samagrasamachara.com/2025/04/15/kukke-subramanya-bisu-car-festive/ Tue, 15 Apr 2025 06:01:24 +0000 https://sullia.samagrasamachara.com/?p=71098 ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಪ್ರದಾಯದ ಪ್ರಕಾರ ಬಿಸು ಕಣಿ ಮತ್ತು ಸೌರಮಾನ ಯುಗಾದಿಯನ್ನು ಸೋಮವಾರ(ಎ.14) ಆಚರಿಸಲಾಯಿತು. ಬಿಸು ಹಬ್ಬದ ಅಂಗವಾಗಿ ಕುಕ್ಕೆ ದೇವಳದಲ್ಲಿ ಬಿಸು ಕಣಿಯನ್ನು ದೇವರಿಗೆ ದರ್ಶನ ಮಾಡಲಾಯಿತು. ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಬಿಸು ರಥೋತ್ಸವ ನಡೆಯಿತು.

ರಾಜಬೀದಿಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಚಿಕ್ಕರಥೋತ್ಸವ ನೆರವೇರಿತು. ರಥೋತ್ಸವದ ಬಳಿಕ ದೇವಳದ ಹೊರಾಂಗಣದಲ್ಲಿರುವ ದ್ವಾದಶಿ ಮಂಟಪದಲ್ಲಿ ಪೂಜೆ ನೆರವೇರಿತು. ದೇವರ ದರ್ಶನ ಮತ್ತು ಸೇವೆಗಳು ಉತ್ಸವದ ನಂತರ ಆರಂಭವಾದವು.

ಭಾನುವಾರ ರಾತ್ರಿ ಮಹಾಪೂಜೆಯ ನಂತರ ವಿಷು ಪ್ರಯುಕ್ತ ದೇವರಿಗೆ ವಿಶೇಷ ಪಾಲಕಿ ಮತ್ತು ಬಂಡಿ ರಥೋತ್ಸವ ನೆರವೇರಿತು. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಭಕ್ತರು ಭಾಗವಹಿಸಿದ್ದರು.

]]>
71098
ಗುತ್ತಿಗಾರು: ಶ್ರೀ ಕೃಷ್ಣ ಭಜನಾ ಮಂದಿರದ ವಾರ್ಷಿಕ ಭಜನಾ ಆಮಂತ್ರಣ ಪತ್ರ ಬಿಡುಗಡೆ https://sullia.samagrasamachara.com/2025/02/14/news-one-114/ Fri, 14 Feb 2025 08:00:02 +0000 https://sullia.samagrasamachara.com/?p=70819 ಗುತ್ತಿಗಾರು ಶ್ರೀ ಕೃಷ್ಣ ಭಜನಾ ಮಂದಿರ (ರಿ) ಇದರ ವಾರ್ಷಿಕ ಭಜನಾ ಆಮಂತ್ರಣ ಪತ್ರ ಫೆ.6 ರಂದು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷ ರವಿಪ್ರಕಾಶ್ ಬಲ್ಲಡ್ಕ, ಕಾರ್ಯದರ್ಶಿ ಪೂರ್ಣಚಂದ್ರ ಪೈಕ, ಸದಸ್ಯರಾದ ನಾರಾಯಣ ಕುತ್ಯಾಲ, ಅಜಿತ್ ಬಾಕಿಲ, ಸುಕೇಶ್ ಚಾರ್ಮತ , ವಿನಯ ದೇರಪಜ್ಜನಮನೆ, ಅಲ್ಲದೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರಾಕೇಶ್ ಮೆಟ್ಟಿನಡ್ಕ ,IFC ಅಧ್ಯಕ್ಷ ಮುಳಿಯ ಸಾತ್ವಿಕ್, ಚರಣ್ ಕುಂಬೊಟ್ಟು ಮತ್ತಿತರು ಉಪಸ್ಥಿತರಿದ್ದರು.

]]>
70819