Subramanya – Sullia Samagra Samachara https://sullia.samagrasamachara.com Samagra Media Network Wed, 05 Aug 2026 16:57:55 +0000 en-US hourly 1 https://wordpress.org/?v=7.0.3 https://sullia.samagrasamachara.com/wp-content/uploads/2024/07/cropped-logo-samagra-32x32.jpg Subramanya – Sullia Samagra Samachara https://sullia.samagrasamachara.com 32 32 235500897 ಸುಬ್ರಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರಿಗಾಗಿ “ಸ್ವಸ್ಥ ಮಹಿಳೆ – ಸಮೃದ್ಧ ಭವಿಷ್ಯ” ಕಾರ್ಯಕ್ರಮ https://sullia.samagrasamachara.com/2026/08/05/news-one-321/ Wed, 05 Aug 2026 16:57:55 +0000 https://sullia.samagrasamachara.com/?p=71989 ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ, ಸುಬ್ರಹ್ಮಣ್ಯದ ಮಹಿಳಾ ಸಬಲೀಕರಣ ಘಟಕ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶ ಇವುಗಳ ಸಹಯೋಗದೊಂದಿಗೆ ಆ.5 ಬುಧವಾರದಂದು ಮಹಿಳಾ ವಿದ್ಯಾರ್ಥಿನಿಯರಿಗಾಗಿ “ಸ್ವಸ್ಥ ಮಹಿಳೆ – ಸಮೃದ್ಧ ಭವಿಷ್ಯ” ಎಂಬ ವಿಷಯದ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಲೀಲಾವತಿ ಪಂಜ, ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರು ಆಗಮಿಸಿದ್ದರು. ಇವರು ವಿದ್ಯಾರ್ಥಿನಿಯರಿಗೆ ಪೌಷ್ಟಿಕ ಆಹಾರದ ಅಗತ್ಯತೆ, ಋತುಚಕ್ರದ ಸಮಸ್ಯೆಗಳು, ಮಹಿಳೆಯರ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಬಗ್ಗೆ ವಿಸ್ತಾರವಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ್ ಪಿ.ಟಿ ವಹಿಸಿದ್ದರು ಮತ್ತು ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಮಹಿಳಾ ಸಬಲೀಕರಣ ಘಟಕದ ಸದಸ್ಯರಾದ ಶ್ರೀಮತಿ ಅಶ್ವಿನಿ ಎಸ್.ಎನ್. ಹಾಗೂ ಕುಮಾರಿ ಭಕ್ತಿ ಶ್ರೀ ಇವರು ಕಾರ್ಯಕ್ರಮಕ್ಕೆ ಸಹಕರಿಸಿದರು. ಕಾರ್ಯಕ್ರಮದಲ್ಲಿ ಮಹಿಳಾ ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಸಬಲೀಕರಣ ಘಟಕದ ಸಂಯೋಜಕರಾದ ಶ್ರೀಮತಿ ಕೃತಿಕಾ ಪಿ.ಎಸ್. ಅವರು ಸ್ವಾಗತಿಸಿದರು. ವಿದ್ಯಾರ್ಥಿ ನಾಯಕಿ ಕುಮಾರಿ ದೇವಿಕ, ತೃತೀಯ B.Com ವಂದನಾರ್ಪಣೆ ನೆರವೇರಿಸಿದರು. ಕಾರ್ಯಕ್ರಮವನ್ನು ಕುಮಾರಿ ಸಂಖ್ಯಾ, ತೃತೀಯ B.A ಮತ್ತು ಕುಮಾರಿ ವರ್ಷಿಣಿ ಕೆ, ದ್ವಿತೀಯ B.A ನಿರೂಪಿಸಿದರು.

]]>
71989
ಸುಬ್ರಹ್ಮಣ್ಯ : ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ ಸಮಾರಂಭ https://sullia.samagrasamachara.com/2026/08/03/news-one-319/ Mon, 03 Aug 2026 04:27:55 +0000 https://sullia.samagrasamachara.com/?p=71983 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಬ್ರಹ್ಮಣ್ಯ, ಕಲ್ಲಾಜೆ ಮತ್ತು ಕುಲ್ಕುಂದ ಒಕ್ಕೂಟಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಆ.2 ರಂದು ನಡೆಸಲಾಯಿತು.

ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ವಿಮಲಾ ರಂಗಯ್ಯರವರ ಅಧ್ಯಕ್ಷತೆ ಯಲ್ಲಿ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು  ಕುಲ್ಕುಂದ ಬಸವನಮೂಲೆ ಶ್ರೀ ಬಸವೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಗಿರಿಧರ ಸ್ಕಂದರವರು ದೀಪ ಪ್ರಜ್ವಲಿಸಿ ಶುಭ ಹಾರೈಸಿದರು .

ಈ ಸಮಾರಂಭದಲ್ಲಿ ಒಕ್ಕೂಟಗಳ ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿಯನ್ನು ಹಸ್ತಾಂತರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕಿನ ಯೋಜನಾಧಿಕಾರಿಯವರಾದ ಮಾಧವ ಗೌಡರವರು ನೆರವೇರಿಸಿ ಮಾತನಾಡುತ್ತ, ಕಾರ್ಯಕ್ರಮವನ್ನು ಸಂಭ್ರಮಿಸುತ್ತಿರುವ ಈ ಪದಗ್ರಹಣ ಸಮಾರಂಭದ ಹಿಂದಿರುವ ಆಶಯ ಮತ್ತು ಶಕ್ತಿ ನಿಜಕ್ಕೂ ಅಪಾರವಾದದು. ಪರಮಾಪೂಜ್ಯ ಡಾ | ಡಿ. ವೀರೇಂದ್ರ ಹೆಗ್ಗಡೆಯವರಿಂದ ಆರಂಭವಾದ ಈ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಂದು ಕೋಟ್ಯಂತರ ಗ್ರಾಮೀಣ ಕುಟುಂಬಗಳ ಬದುಕಿಗೆ ಬೆಳಕಾಗಿದೆ. ಪ್ರಗತಿ ಬಂಧು ಎಂಬುದು ಶ್ರಮದಾನ ಮತ್ತು ಪರಸ್ಪರ ಸಹಕಾರದ ಮೂಲಕ ಕೃಷಿಕರ ಶ್ರಮವನ್ನು ಹಸನುಗೊಳಿಸಿದ ಅಪೂರ್ವ ಮಾದರಿಯಾಗಿದೆ. ಸಣ್ಣ ಉಳಿತಾಯದಿಂದ ತೊಡಗಿ ಇಂದಿನ ಜ್ಞಾನ ವಿಕಾಸದವರೆಗೆ ಗ್ರಾಮೀಣ ಮಹಿಳೆಯಾರಿಗೆ ಆತ್ಮವಿಶ್ವಾಸ ಹಾಗೂ ಆರ್ಥಿಕ ಭದ್ರತೆಯನ್ನು ನೀಡಿದೆ. ಗ್ರಾಮ ಮಟ್ಟದ ಸ್ವಸಹಾಯ ಸಂಘಗಳು ಒಕ್ಕೂಟಗಳಾಗಿ ರೂಪುಗೊಂಡು ಇಂದು ನಾಯಕತ್ವ ಬೆಳೆಸುವ ದೊಡ್ಡ ವೇದಿಕೆಯಾಗಿ ರೂಪುಗೊಂಡಿದೆ. ಇಂತಹ ಪವಿತ್ರ ಸಂಸ್ಥೆಯಲ್ಲಿ ಸೇವೆಯನ್ನು ಒಕ್ಕೂಟದ ಪದಾಧಿಕಾರಿಗಳು ಜವಾಬ್ದಾರಿಯುತ್ತವಾಗಿ ಮುಂದುವರಿಸಿ ಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಈ ಸಮಾರಂಭದಲ್ಲಿ ಸುಬ್ರಹ್ಮಣ್ಯ ವಲಯದ ತಾಲೂಕು ಭಜನೋತ್ಸವ ಸಮಿತಿ 2026 ರ ಅಧ್ಯಕ್ಷರಾದ ಡಾ | ರವಿ ಕಕ್ಕೆಪದವುರವರು, ಸುಬ್ರಹ್ಮಣ್ಯ ವಲಯದ ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ ಸತೀಶ್ ಟಿ ಎನ್ ರವರು, ಸುಬ್ರಹ್ಮಣ್ಯ ವಲಯದ ಭಜನಾ ಪರಿಷತ್ ನ ವಲಯ ಅಧ್ಯಕ್ಷರಾದ ಚಂದ್ರಶೇಖರ ಕೊಂದಳರವರು, ಸುಬ್ರಹ್ಮಣ್ಯ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಪವಿತ್ರ ದಿನೇಶ್ ರವರು, ಕಲ್ಲಾಜೆ ಒಕ್ಕೂಟದ ಅಧ್ಯಕ್ಷರಾದ ಮೋನಪ್ಪ ಗೌಡರವರು, ಕುಲ್ಕುಂದ ಒಕ್ಕೂಟದ ಅಧ್ಯಕ್ಷರಾದ ಹರಿಪ್ರಸಾದ್ ರವರು, ಸುಬ್ರಹ್ಮಣ್ಯ ಒಕ್ಕೂಟದ ನೂತನ ಅಧ್ಯಕ್ಷರಾದ ಶ್ರೀಮತಿ ರತ್ನಾವತಿರವರು, ಕುಲ್ಕುಂದ ಒಕ್ಕೂಟದ ನೂತನ ಒಕ್ಕೂಟದ ಅಧ್ಯಕ್ಷರಾದ ರವಿಚಂದ್ರರವರು ಉಪಸ್ಥಿತರಿದ್ದರು.

ಈ ಸಮಾರಂಭದಲ್ಲಿ ಕುಲ್ಕುಂದ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿಯವರಾದ ಹರಿಣಾಕ್ಷಿರವರು ಸಾಧನೆಯ ವರದಿ ಮಂಡನೆ ಮಾಡಿದರು. ನೂತನ ಒಕ್ಕೂಟದ ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರವನ್ನು ಮತ್ತು ನೂತನ ಒಕ್ಕೂಟದ ಕಾರ್ಯದರ್ಶಿಗಳಿಗೆ ದಾಖಲಾತಿ ಹಸ್ತಾಂತರ ಮಾಡಲಾಯಿತು. ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರನ್ನು, ವಲಯದ ಭಜನಾ ಪರಿಷತ್ ನ ಪದಾಧಿಕಾರಿಗಳನ್ನು, ನವಜೀವನ ಸಮಿತಿಯ ಸದಸ್ಯರನ್ನು ಗುರುತಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟಗಳ ನಿಕಟ ಪೂರ್ವ ಪದಾಧಿಕಾರಿಗಳು, ನೂತನ ಪದಾಧಿಕಾರಿಗಳು, ಸುಬ್ರಹ್ಮಣ್ಯ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ಶೈಲಜಾರವರು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಎಲ್ಲಾ ಸದಸ್ಯರುಗಳು, ನವಜೀವನ ಸಮಿತಿಯ ಸದಸ್ಯರುಗಳು, ಯೋಜನೆಯ ಎಲ್ಲಾ ಹಿತೈಷಿ ಬಂಧುಗಳು ಭಾಗವಹಿಸಿದರು.

ಈ ಸಮಾರಂಭದಲ್ಲಿ ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ ಕೆ ರವರು ಸ್ವಾಗತಿಸಿದರು, ಶ್ರದ್ದಾ ಸಂಘದ ಸದಸ್ಯರಾದ ಶ್ರೀಮತಿ ಜಯಶ್ರೀರವರು ಧನ್ಯವಾದವಿತ್ತರು. ಸುಬ್ರಹ್ಮಣ್ಯ ಒಕ್ಕೂಟದ ನಿಕಟ ಪೂರ್ವ ಉಪಾಧ್ಯಕ್ಷರಾದ ರಾಮಚಂದ್ರರವರು ಕಾರ್ಯಕ್ರಮ ನಿರೂಪಿಸಿದರು.

]]>
71983
ಸುಬ್ರಮಣ್ಯ: ಕೆ .ಎಸ್.ಎಸ್ ಕಾಲೇಜಿನಲ್ಲಿ ಮಾದಕ ದ್ರವ್ಯ,ಪೋಕ್ಸೋ ಕಾಯ್ದೆ ಮತ್ತು ಸೈಬರ್ ಕ್ರೈಂ ಬಗ್ಗೆ ಅರಿವು ಕಾರ್ಯಕ್ರಮ https://sullia.samagrasamachara.com/2026/07/26/news-one-317/ Sun, 26 Jul 2026 09:49:06 +0000 https://sullia.samagrasamachara.com/?p=71976 ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಆ್ಯಂಟಿ ಡ್ರಗ್ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕವು ಜಂಟಿಯಾಗಿ ಜು.24 ರಂದು ಮಾದಕ ದ್ರವ್ಯ, ಪೋಕ್ಸೋ ಕಾಯ್ದೆ ಮತ್ತು ಸೈಬರ್ ಕ್ರೈಂ ಅರಿವು ಹಾಗೂ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ ಪಿ.ಟಿ ವಹಿಸಿದರು. ಸಂಪನ್ಮೂಲ ವ್ಯಕ್ತಿಯಾದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಬಾಬುರೆಡ್ಡಿ ಆಗಮಿಸಿದ್ದರು, ಅವರು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ, ಪೋಕ್ಸೋ ಕಾಯ್ದೆ ಮತ್ತು ಸೈಬರ್ ಕ್ರೈಂ ಬಗ್ಗೆ ಮಾಹಿತಿ ಹಾಗೂ ಜಾಗೃತಿ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿಯಾದ ಆಂಜನೇಯ ರೆಡ್ಡಿ ಉಪಸ್ಥಿತರಿದ್ದರು. ಆ್ಯಂಟಿ ಡ್ರಗ್ ಘಟಕ ಸಂಯೋಜಕರಾದ ಶ್ರೀ ಮನೋಹರ್ ಸ್ವಾಗತಿಸಿ, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮ ಅಧಿಕಾರಿ ಶ್ರೀಮತಿ ಸುಮಿತ್ರ ವಂದಿಸಿದರು, ಶ್ರೀಮತಿ ಆರತಿ ಕಾರ್ಯಕ್ರಮ ನಿರೂಪಿಸಿದರು.

]]>
71976
ಸುಬ್ರಮಣ್ಯ: ಭಾರತೀಯ ಮಜ್ದೂರ್ ಸಂಘ (BMS ) ಸ್ಥಾಪನ ದಿನಾಚರಣೆ ಜು .23 ರಂದು ಆಚರಣೆ  https://sullia.samagrasamachara.com/2026/07/23/news-one-316/ Thu, 23 Jul 2026 14:41:14 +0000 https://sullia.samagrasamachara.com/?p=71973 ಭಾರತೀಯ ಮಜ್ದೂರ್ ಸಂಘ (BMS ) ಸ್ಥಾಪನ ದಿನಾಚರಣೆಯನ್ನು ಸುಬ್ರಮಣ್ಯ ಘಟಕದಲ್ಲಿ ಭಾರತ ಮಾತೆಯ ಭಾವಚಿತ್ರದ ಎದುರು ದೀಪ ಪ್ರಜ್ವಲಿಸಿ ಮಾತೆಯ ಭಾವಚಿತ್ರಕೆ ಪುಷ್ಪರ್ಚನೆ ಮಾಡುವ ಮೂಲಕ ಜು.23 ರಂದು ಆಚರಿಸಲಾಯಿತು.

ಬಿ. ಎಮ್. ಎಸ್ ಎಂದರೇನು ಮತ್ತು ನಮಗೆ ಏಕೆ ಈ ಸಂಘಟನೆ  ಬೇಕು ಎಬುದನ್ನು ಸಂಘದ ಮಾಜಿ ಅಧ್ಯಕ್ಷರಾದ ಸುಬ್ಬಪ್ಪ ಕುಲ್ಕುಂದ ರವರು ಸಭೆಯಲ್ಲಿ ಸೇರಿದ ಸದಸ್ಯರುಗಳಿಗೆ ತಿಳಿಸಿದರು.

 ನಂತರ ಎಲ್ಲಾ ಸದಸ್ಯರುಗಳಿಗೆ ಸಿಹಿ ತಿಂಡಿ ಹಂಚಿ ಸಂಘದ ಸ್ಥಾಪನ ದಿನಾಚರಣೆಯನ್ನು ಸಂಭ್ರಮಿಸಲಾಯಿತು .

]]>
71973
ಸುಬ್ರಹ್ಮಣ್ಯ: ಕೆ.ಎಸ್.ಎಸ್. ಕಾಲೇಜಿನಲ್ಲಿ ಅತಿಥಿ ಉಪನ್ಯಾಸ https://sullia.samagrasamachara.com/2026/04/23/subramanya-kss-college-news-3/ Thu, 23 Apr 2026 03:40:37 +0000 https://sullia.samagrasamachara.com/?p=71910 ಸುಬ್ರಹ್ಮಣ್ಯ: ಇಲ್ಲಿನ‌ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ, ಮಾದಕ ದ್ರವ್ಯ ವಿರೋಧಿ ಘಟಕ, ಮಾದಕ ದ್ರವ್ಯ ವಿರೋಧಿ ಘಟಕ
ಮತ್ತು ಸಮಾಜಶಾಸ್ತ್ರ ವಿಭಾಗ ಜಂಟಿಯಾಗಿ ‘ಆಂಟಿ ರಾಗ್, ಆಂಟಿ ಡ್ರಗ್ ಮತ್ತು ಪೋಕ್ಸೊ’ ಕುರಿತು ಅತಿಥಿ ಉಪನ್ಯಾಸವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಸುಬ್ರಹ್ಮಣ್ಯ ಠಾಣಾ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅವರು ವಿದ್ಯಾರ್ಥಿಗಳ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಮಾದಕ ವ್ಯಸನ, ರ‍್ಯಾಗ್ಗಿಂಗ್ ಚಟುವಟಿಕೆಗಳು ಮತ್ತು ಪೋಕ್ಸೊ ಕಾಯ್ದೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು ಮತ್ತು ಸಮಾಜದ ಆರೋಗ್ಯವನ್ನು ಕಾಪಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ತಮ್ಮದೇ ಆದ ಉಪಕ್ರಮದಿಂದ ಉತ್ತಮ ಸಮಾಜವನ್ನು ನಿರ್ಮಿಸಲು ಶ್ರಮಿಸಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ.ಟಿ ವಹಿಸಿದ್ದರು. ಮಾದಕ ದ್ರವ್ಯ ವಿರೋಧಿ ಘಟಕ ಮತ್ತು ರೇಗಿಂಗ್ ವಿರೋಧಿ ಘಟಕಗಳ ಸಂಯೋಜಕರಾದ ಶಿವಪ್ರಸಾದ್ ಎಸ್, ನಮಿತಾ ಎಂ.ಎ ವನಿತಾ ಕೆ.ಎನ್. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಮನೋಹರ್ ಸ್ವಾಗತಿಸಿದರು ಮತ್ತು ತೃತೀಯ ಬಿ.ಕಾಂ.ನ ವಿದ್ಯಾರ್ಥಿ ಪ್ರತಿನಿಧಿ ಜೀವಿತ್ ಧನ್ಯವಾದ ಅರ್ಪಿಸಿದರು. ಪ್ರಥಮ ಬಿ.ಕಾಂ ವಿದ್ಯಾರ್ಥಿನಿ ಅನನ್ಯಾ ಕಾರ್ಯಕ್ರಮ ನಿರೂಪಿಸಿದರು.

]]>
71910
ಚಂದ್ರಗ್ರಹಣ ಹಿನ್ನಲೆ| ಮಾ.02 ಮತ್ತು 3ರಂದು ಕುಕ್ಕೆಯಲ್ಲಿ ದರ್ಶನ, ಸೇವೆ ವ್ಯತ್ಯಯ https://sullia.samagrasamachara.com/2026/02/12/moon-eclips-cause-pooja-seva-delayed-at-kukke/ Thu, 12 Feb 2026 08:19:12 +0000 https://sullia.samagrasamachara.com/?p=71828 ಸುಬ್ರಹ್ಮಣ್ಯ: ಚಂದ್ರಗ್ರಹಣದ ಅಂಗವಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾರ್ಚ್‌ 2 ಮತ್ತು 3ರಂದು ದೇವರ ದರ್ಶನ ಹಾಗೂ ಸೇವೆಗಳಲ್ಲಿ ವ್ಯತ್ಯಯವಾಗಲಿದೆ ಎಂದು ದೇವಳದ ಆಡಳಿತ ತಿಳಿಸಿದೆ.

ಮಾರ್ಚ್‌ 2 ಮತ್ತು 3ರಂದು ಸರ್ಪಸಂಸ್ಕಾರ ಪೂಜೆ ನಡೆಯುವುದಿಲ್ಲ. 3ರಂದು ಯಾವುದೇ ಸೇವೆಗಳು ಇರುವುದಿಲ್ಲ. ಅಂದು ಮಧ್ಯಾಹ್ನದ ಮಹಾಪೂಜೆ ಬೆಳಿಗ್ಗೆ 8ಕ್ಕೆ ನಡೆಯಲಿದೆ. 9 ಗಂಟೆಯ ಬಳಿಕ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಬೆಳಿಗ್ಗೆಯ ಉಪಾಹಾರ 9 ಗಂಟೆವರೆಗೆ ಸಿಗಲಿದೆ. ಮಧ್ಯಾಹ್ನ ಭೋಜನ ವ್ಯವಸ್ಥೆ ಇರುವುದಿಲ್ಲ. ಸಂಜೆ 7ರ ನಂತರ ದೇವರ ಮಹಾಪೂಜೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

]]>
71828
ಕುಕ್ಕೆ ದೇಗುಲಕ್ಕೆ ಎರಡೇ ತಿಂಗಳಲ್ಲಿ 15 ಕೋಟಿ ಆದಾಯ https://sullia.samagrasamachara.com/2026/01/22/kukke-temple-income-increase/ Thu, 22 Jan 2026 03:08:38 +0000 https://sullia.samagrasamachara.com/?p=71787 ಸುಬ್ರಹ್ಮಣ್ಯ: ರಾಜ್ಯದ ‌ಪ್ರಮುಖ ದೇವಾಲಯಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಳೆದ ಎರಡು ತಿಂಗಳಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, 15 ಕೋಟಿ ರೂ.ಗೂ ಅಧಿಕ ಆದಾಯ ಬಂದಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ವಿವಿಧ ಸೇವೆಗಳಿಂದ 4.56 ಲಕ್ಷ ಹಣ ಬಂದಿದ್ದರೆ, ಹುಂಡಿಯಲ್ಲಿ 1.9 ಕೋಟಿ ರೂ. ಸಂಗ್ರಹವಾಗಿದೆ. ಹಾಗೆ ಅನ್ನದಾನ ನಿಧಿಯಿಂದ 83.57 ಲಕ್ಷ ರೂ. ಆದಾಯ ಹರಿದು ಬಂದಿದೆ.

ಇನ್ನು ಡಿಸೆಂಬರ್ ತಿಂಗಳಲ್ಲಿ ನಾನಾ ಸೇವೆಗಳಿಂದ 5.30 ಲಕ್ಷ ಹಣ ಬಂದಿದ್ದರೆ, ಹುಂಡಿಯಲ್ಲಿ 1.99 ಕೋಟಿ ರೂ. ಸಂಗ್ರಹವಾಗಿದೆ. ಹಾಗೆ ಅನ್ನದಾನ ನಿಧಿಯಿಂದ 1.07 ಕೋಟಿರೂ. ಆದಾಯ ಗಳಿಸಿದೆ.

ಇದನ್ನು ಹೊರತು ಪಡಿಸಿ ವಸತಿ ಗೃಹ, ಇನ್ನಿತರ ಮೂಲಗಳಿಂದ ಸುಮಾರು 15 ಕೋಟಿ ರೂ. ಗೂ ಹೆಚ್ಚು ಆದಾಯ ಸಂಗ್ರಹವಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ್ ಅಯ್ಯಪ್ಪ ಸುತಗುಂಡಿ ತಿಳಿಸಿದ್ದಾರೆ.

]]>
71787
ಸುಬ್ರಹ್ಮಣ್ಯ: ನೋಟೀಸ್ ನೀಡಿದ ಬೆನ್ನಲ್ಲೇ 2.67 ಕೋಟಿ ತೆರಿಗೆ ಪಾವತಿಸಿದ ಕುಕ್ಕೆ ಆಡಳಿತ ಮಂಡಳಿ https://sullia.samagrasamachara.com/2025/12/23/kukke-subramanya-temple-news/ Tue, 23 Dec 2025 02:55:21 +0000 https://sullia.samagrasamachara.com/?p=71733 ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಿಂದ ಬಾಕಿಯಾಗಿದ್ದ ರೂ. 2 ಕೋಟಿ 67 ಲಕ್ಷ ಆಸ್ತಿ ತೆರಿಗೆಯನ್ನು ಇಂದು ಪಾವತಿಸಲಾಗಿದೆ ಎಂದು ವರದಿಯಾಗಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಸತಿಗೃಹಗಳ ಆಸ್ತಿ ತೆರಿಗೆ ದೀರ್ಘಕಾಲ ಬಾಕಿ ಉಳಿದಿದ್ದ ಹಿನ್ನೆಲೆಯಲ್ಲಿ, ವಸತಿಗೃಹ ಜಪ್ತಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್‌ ನೋಟಿಸ್‌ ಜಾರಿ ಮಾಡಿತ್ತು.

ಈ ನೋಟಿಸ್‌ ನೀಡಿದ ಬಳಿಕವೇ ದೇವಸ್ಥಾನ ಆಡಳಿತದಿಂದ ಬಾಕಿ ತೆರಿಗೆ ಮೊತ್ತವನ್ನು ಸಂಪೂರ್ಣವಾಗಿ ಪಾವತಿಸಲಾಗಿದೆ ಎಂದು ತಿಳಿದುಬಂದಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಶ್ಲೇಷ ವಸತಿಗೃಹಕ್ಕೆ ಸಂಬಂಧಿಸಿದಂತೆ ರೂ. 1 ಕೋಟಿ 23 ಲಕ್ಷ ಹಾಗೂ ದೇವಸ್ಥಾನಕ್ಕೆ ಸೇರಿದ ಇತರೆ ಕೆಲವು ಕಟ್ಟಡಗಳ ರೂ. 1 ಕೋಟಿ 44 ಲಕ್ಷ ಆಸ್ತಿ ತೆರಿಗೆ ಬಾಕಿಯನ್ನು ಪಾವತಿಸಲಾಗಿದೆ. ಈ ಮೂಲಕ ಒಟ್ಟು ರೂ. 2 ಕೋಟಿ 67 ಲಕ್ಷ ತೆರಿಗೆ ಮೊತ್ತ ಗ್ರಾಮ ಪಂಚಾಯತ್‌ಗೆ ಸಂದಿದೆ. ಈ ಬೆಳವಣಿಗೆಗೆ ಕಡಬ ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ ಹಾಗೂ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಆಡಳಿತ ಸಂತಸ ವ್ಯಕ್ತಪಡಿಸಿದ್ದು, ಬಾಕಿ ತೆರಿಗೆ ಪಾವತಿಸಿದಕ್ಕಾಗಿ ದೇವಸ್ಥಾನ ಆಡಳಿತಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ 2024-25ನೇ ಸಾಲಿನ ಆದಾಯ ₹155.95 ಕೋಟಿ ಆಗಿತ್ತು. ಈ ಆದಾಯವು 2023-24ನೇ ಸಾಲಿಗೆ ಹೋಲಿಸಿದರೆ 9.94 ಕೋಟಿ ರೂ. ಹೆಚ್ಚಾಗಿದ್ದು, ದೇವಸ್ಥಾನವು ರಾಜ್ಯದ ಶ್ರೀಮಂತ ದೇವಸ್ಥಾನಗಳಲ್ಲಿ ಅಗ್ರಸ್ಥಾನ ಪಡೆದುಕೊಂಡಿತ್ತು. ದೇವಸ್ಥಾನದ ಒಟ್ಟು ಖರ್ಚು 79.82 ಕೋಟಿ ರೂ. ಆಗಿತ್ತು. ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯ ದತ್ತಿ ಇಲಾಖೆಯಡಿ ಬರುವ ಈ ದೇಗುಲವು ಕುಕ್ಕೆ ಶ್ರೀ ಸುಬ್ರಹ್ಮಣ್ಯ ನಾಗಾರಾಧನೆಯ ಪ್ರಮುಖ ಕ್ಷೇತ್ರವಾಗಿದ್ದು, ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಿಂದಲೂ ನಿತ್ಯ ಸಾವಿರಾರು ಭಕ್ತರು ಬರುತ್ತಾರೆ. ಸರ್ಪ ಸಂಸ್ಕಾರ ಸೇರಿದಂತೆ ವಿವಿಧ ಸೇವೆ ಹಾಗೂ ಇತರ ಮೂಲಗಳಿಂದ ಈ ಆದಾಯ ಬಂದಿದೆ.

]]>
71733
ಸುಬ್ರಹ್ಮಣ್ಯ: ಕೆ. ಎಸ್. ಎಸ್ :ಇಂಟರ್ ಕಾಲೇಜು ಪ್ರೇರಣಾ ಪಿಯು ಫೆಸ್ಟ್ https://sullia.samagrasamachara.com/2025/12/15/news-one-282/ Mon, 15 Dec 2025 13:24:47 +0000 https://sullia.samagrasamachara.com/?p=71721 ಸುಬ್ರಹ್ಮಣ್ಯ: ಇಲ್ಲಿನ ಕುಕ್ಕೆ ಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯದ ವಾಣಿಜ್ಯ ಮತ್ತು ಉದ್ಯಮಾಡಳಿತ ವಿಭಾಗದ ವತಿಯಿಂದ ಆಯೋಜಿಸಲಾದ ಇಂಟರ್ ಕಾಲೇಜು ಮಟ್ಟದ “ಪ್ರೇರಣಾ ಪಿಯು ಫೆಸ್ಟ್” ಅನ್ನು ಡಿಸೆಂಬರ್ ೧೧ ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸುಬ್ರಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ ನೆರವೇರಿಸಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾಕ್ಟರ್ ದಿನೇಶ ಪಿಟಿ ವಹಿಸಿದ್ದರು. ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಐಕ್ಯೂ ಎಸಿ ಸಂಯೋಜಕರೂ ಹಾಗೂ ವಾಣಿಜ್ಯ ಹಾಗೂ ಉದ್ಯಮಾಡಳಿತ ವಿಭಾಗದ ಮುಖ್ಯಸ್ಥರಾದ ಪ್ರೊ. ಲತಾ ಬಿ.ಟಿ, ಫೆಸ್ಟ್ ನ ಸಂಯೊಜಕರಾದ ಶ್ರೀಮತಿ ಮಧುರ ಕೆ, ಶೈಕ್ಷಣಿಕ ಸಲಹೆಗಾರರಾದ ಶ್ರೀ ರಮಾನಾಥ,ಶ್ರೀಮತಿ ಪ್ರಮೀಳಾ ಮತ್ತು ಶ್ರೀಮತಿ ಅಶ್ವಿನಿ ಹಾಗೂ ವಿದ್ಯಾರ್ಥಿ ಸಂಯೋಜರಾದ ಮನ್ವಿತ್,ಆಸ್ಥಿಕ್ ಮತ್ತು ರಕ್ಷಾ ಉಪಸ್ಥಿತರಿದ್ದರು.

ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ರು ಹಾಗೂ ಸದಸ್ಯರು, ಪೂರ್ವ ವಿದ್ಯಾರ್ಥಿ ಸಂಘದ ಸದಸ್ಯರು ಉಪಸ್ಥಿತರಿದ್ದರು. ಫೆಸ್ಟ್‌ನ ಅಂಗವಾಗಿ ಕ್ವಿಜ್ , ಟ್ರೆಶರ್ ಹಂಟ್, ಮಾರ್ಕೆಟಿಂಗ್, ಫೈನಾನ್ಸ್, ಫೇಸ್ ಪೈಂಟಿಂಗ್, ಸಮೂಹ ನೃತ್ಯ ಮತ್ತು ಬೆಸ್ಟ್ ಮ್ಯಾನೇಜರ್ ಎಂಬ ಒಟ್ಟು ಎಂಟು ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, 22 ವಿವಿಧ ಕಾಲೇಜುಗಳಿಂದ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.

ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ತುಳು ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಜೆಪಿ ತುಮಿನಾಡ್ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ ಪಿ.ಟಿ ವಹಿಸಿದ್ದರು. ಸಂಯೋಜಕಿ ಮಧುರ ಕೆ ಸ್ವಾಗತಿಸಿ, ವಿದ್ಯಾರ್ಥಿನಿ ಸಂಜನಾ ಕಾರ್ಯಕ್ರಮ ನಿರೂಪಿಸಿದರು. ಸುಬ್ರಹ್ಮಣ್ಯದ
ಕುಮಾರಸ್ವಾಮಿ ಪಿ.ಯು ಕಾಲೇಜು ಚಾಂಪಿಯನ್ ಆಗಿಯು, ಕೆಎಸ್ ಗೌಡ ಕಾಲೇಜು ನಿಂತಿಕಲ್ ಹಾಗೂ ಎಸ್ ಎಸ್ ಪಿ ಯು ಕಾಲೇಜು ದ್ವಿತೀಯ ರನ್ನರ್ ಆಗಿಯೂ ಹೊರಹೊಮ್ಮಿದರು. ಫೆಸ್ಟ್ ಪ್ರಯುಕ್ತ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಗಳಾದ ಸಿಎಸ್ ರೇನುಣುಪ್ರಸಾದ್ ಹೊಸಳಿಕೆ ಮತ್ತು ಸಿಎ ಚಕ್ರಪಾಣಿ ಅವರನ್ನು ಸನ್ಮಾನಿಸಲಾಯಿತು.

]]>
71721
ಸುಬ್ರಹ್ಮಣ್ಯ: ಭಕ್ತರ ಜೊತೆ ಆಟವಾಡುತ್ತಿದ್ದಾಗ ಅಡ್ಡ ಬಂದ ಸಿಬ್ಬಂದಿಯನ್ನು ಸೊಂಡಿಲಿನಿಂದ ತಳ್ಳಿದ ಯಶಸ್ವಿನಿ https://sullia.samagrasamachara.com/2025/12/04/news-one-277/ Thu, 04 Dec 2025 07:30:06 +0000 https://sullia.samagrasamachara.com/?p=71693 ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ದೇಗುಲದ ಆನೆ ಯಶಸ್ವಿನಿಯು ಸಿಬ್ಬಂದಿಯನ್ನು ಸೊಂಡಿಲಿನಿಂದ ನೀರಿಗೆ ಎಸೆದು ಕೆಲ ಹೊತ್ತು ಆತಂಕ ಸೃಷ್ಟಿಸಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಾರ್ಷಿಕ ಜಾತ್ರಾ ಪ್ರಯುಕ್ತ ಆಯೋಜಿಸಿದ್ದ ನೀರು ಬಂಡಿ ಉತ್ಸವದ ವೇಳೆ ಈ ಘಟನೆ ನಡೆದಿದೆ.

ಭಕ್ತರೊಂದಿಗೆ ಬೆರೆಯುತ್ತ ಆಟವಾಡುತ್ತಿದ್ದ ಯಶಸ್ವಿನಿ ಆನೆ ಇದ್ದಕ್ಕಿದ್ದಂತೆ ಅಸಮಾಧಾನಗೊಂಡಿದ್ದು, ಅಡ್ಡ ಬಂದ ಸಿಬ್ಬಂದಿಯನ್ನು ಸೊಂಡಿಲಿನಿಂದ ಎತ್ತಿ ಬದಿಗೆ ಎಸೆದಿದೆ. ಸದ್ಯ ಈ ಘಟನೆಯ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಇನ್ನು ಘಟನೆ ನಡೆದ ಕೆಲ ಕ್ಷಣದಲ್ಲೇ ಯಶಸ್ವಿನಿ ಆನೆ ಶಾಂತವಾಗಿದ್ದು, ಯಾವುದೇ ಸಮಸ್ಯೆ ಎದುರಾಗಿಲ್ಲ. ಮಕ್ಕಳು, ಭಕ್ತರು ಆನೆಗೆ ನೀರೆರಚಿದರೆ, ಆನೆ ಸೊಂಡಿಲಿನಿಂದ ಅವರತ್ತ ನೀರು ಚಿಮುಕಿಸಿದೆ. ಸಿಬ್ಬಂದಿಗೂ ಯಾವುದೇ ಗಾಯವಾಗಿಲ್ಲ.

]]>
71693